ಅದಾನಿ ಸಮೂಹದ ವಿರುದ್ಧ ಕ್ರಿಮಿನಲ್ ತನಿಖೆಗೆ ಕೋರಿ ಸುಪ್ರೀಂಗೆ ಅರ್ಜಿ

Prasthutha|

ನವದೆಹಲಿ: ವಿವಿಧ ಕಾನೂನುಗಳ ಪ್ರಕಾರ ಅದಾನಿ ಸಮೂಹದ ಕಂಪನಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೋರಿ ಅರ್ಜಿಯೊಂದು ಸುಪ್ರೀಂ ಕೋರ್ಟ್‌’ನಲ್ಲಿ ಸಲ್ಲಿಕೆಯಾಗಿದ್ದು, ಬೆಲೆ ಹೆಚ್ಚಿದ್ದರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌’ಬಿಐ) ಮತ್ತು ಜೀವ ವಿಮಾ ನಿಗಮ (ಎಲ್‌’ಐಸಿ) ಅದಾನಿ ಸಮೂಹದ ಷೇರುಗಳಲ್ಲಿ ಹೂಡಿಕೆ ಮಾಡಿರುವುದನ್ನು ಪ್ರಶ್ನಿಸಿದೆ.

- Advertisement -

ಮಧ್ಯಪ್ರದೇಶದ ಮಹಿಳಾ ಕಾಂಗ್ರೆಸ್‌’ನ ಪ್ರಧಾನ ಕಾರ್ಯದರ್ಶಿ ಡಾ.ಜಯಾ ಠಾಕೂರ್ ಅವರು ಸಲ್ಲಿಸಿದ ಅರ್ಜಿ “ಮಾರುಕಟ್ಟೆಯಲ್ಲಿ ಷೇರಿನ ಬೆಲೆ 1,600 ಮತ್ತು 1,800ರ ನಡುವೆ ಇದ್ದಾಗ ಎಲ್‌’ಐಸಿ ಮತ್ತು ಎಸ್‌’ಬಿಐ ಪ್ರತಿ ಷೇರಿಗೆ 3,200 ದರದಲ್ಲಿ ಅದಾನಿ ಷೇರುಗಳಲ್ಲಿ ಹೂಡಿಕೆ ಮಾಡಿವೆ” ಎಂದು ದೂರಿದೆ.

ಹಿಂಡೆನ್‌’ಬರ್ಗ್‌ ಸಂಶೋಧನಾ ವರದಿ ಹಿನ್ನೆಲೆಯಲ್ಲಿ ಅದಾನಿ ಸಮೂಹದ ಕಂಪನಿಗಳಿಗೆ ಸಂಬಂಧಿಸಿದಂತೆ ಇದುವರೆಗೆ ಸಲ್ಲಿಸಿದ ಮೂರನೇ ಅರ್ಜಿ ಇದಾಗಿದೆ. ಅದಾನಿ ಕಂಪನಿಗಳು ತಮ್ಮ ಷೇರುಗಳ ಬೆಲೆಯನ್ನು ಅಕ್ರಮವಾಗಿ ಹೆಚ್ಚಿಸಿದ್ದೂ ಸೇರಿದಂತೆ ವಿವಿಧ ವಂಚನೆ ಎಸಗಿರುವುದಾಗಿ ಹಿಂಡೆನ್‌’ಬರ್ಗ್‌ ವರದಿ ಆರೋಪಿಸಿತ್ತು. 

- Advertisement -

ಅರ್ಜಿದಾರರು ಅದಾನಿ ಸಮೂಹ ಮಾತ್ರವಲ್ಲದೆ, ಪ್ರಕರಣದಲ್ಲಿ ಭಾರತ ಒಕ್ಕೂಟ (ಕೇಂದ್ರ ಸರ್ಕಾರ), ಕೇಂದ್ರ ಗೃಹ ಸಚಿವಾಲಯ, ಸಿಬಿಐ, ಇ ಡಿ, ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (ಸಿಬಿಡಿಟಿ), ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌’ಐ), ಮಾದಕ ವಸ್ತು ನಿಯಂತ್ರಣ ದಳ (NCB), ಭಾರತೀಯ ಷೇರು ಮಾರುಕಟ್ಟೆ ವಿನಿಮಯ ಮಂಡಳಿ (ಸೆಬಿ),  ಆರ್‌’ಬಿಐ, ಗಂಭೀರ ವಂಚನೆ ತನಿಖಾ ಕಚೇರಿ (ಎಸ್‌’ಎಫ್‌’ಐಒ), ಎಲ್‌ಐಸಿ ಹಾಗೂ ಎಸ್‌’ಬಿಐಗಳನ್ನು ಪಕ್ಷಕಾರರನ್ನಾಗಿ ಮಾಡಿದ್ದಾರೆ.

(ಕೃಪೆ: ಬಾರ್ & ಬೆಂಚ್)

Join Whatsapp