Home ಟಾಪ್ ಸುದ್ದಿಗಳು ಮೇಕೆದಾಟು: ತಡೆಯಾಜ್ಞೆಯನ್ನು ತೆರವುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಸುಪ್ರೀಮ್ ಕೋರ್ಟ್ ನಲ್ಲಿ ವಿಚಾರಣೆ

ಮೇಕೆದಾಟು: ತಡೆಯಾಜ್ಞೆಯನ್ನು ತೆರವುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಸುಪ್ರೀಮ್ ಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣದ ಕುರಿತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಚೆನ್ನೈ ಪೀಠ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದನ್ನು ಪ್ರಶ್ನಿಸಿ, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಮ್ ಕೋರ್ಟ್ ಮಂಗಳವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

ಈ ಮೊದಲು ಕಳೆದ ವರ್ಷ ಜನವರಿ 3 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಈ ಅರ್ಜಿ ವಿಚಾರಣೆಯನ್ನು ಜನವರಿ 27, 2022 ರಂದು ನಡೆಸುವುದಾಗಿ ಸುಪ್ರೀಮ್ ಕೋರ್ಟ್ ಹೇಳಿತ್ತು.

ಕೃಷ್ಣ ಜಲವಿವಾದ:

ಕೃಷ್ಣ ಜಲ ವಿವಾದದ ತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಬೇಕೆಂದು ಕೋರಿದ್ದ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಸುಪ್ರೀಮ್ ಕೋರ್ಟ್ ನ್ಯಾಯಮೂರ್ತಿಗಳಾದ ಚಂದ್ರಚೂಡ್ ಮತ್ತು ಭೋಪಣ್ಣ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದರು ಎಂದು ಹೇಳಲಾಗಿದೆ.

Join Whatsapp
Exit mobile version