Home ಟಾಪ್ ಸುದ್ದಿಗಳು ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನ ಎಂದು ಘೋಷಿಸುವಂತೆ ಕೋರಿದ ಅರ್ಜಿ ವಜಾ

ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನ ಎಂದು ಘೋಷಿಸುವಂತೆ ಕೋರಿದ ಅರ್ಜಿ ವಜಾ

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದಂದು ರಾಷ್ಟ್ರೀಯ ರಜಾದಿನ ಎಂದು ಘೋಷಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆ.ಬಿ. ಪರ್ಡಿವಾಲಾ ಅವರ ಪೀಠವು ಈ ಅರ್ಜಿಯನ್ನು ತಿರಸ್ಕರಿಸಿದ್ದು, ಇದು ಭಾರತ ಸರ್ಕಾರಕ್ಕೆ ನಿರ್ಧಾರ ತೆಗೆದುಕೊಳ್ಳುವ ವಿಷಯವಾಗಿದೆ ಎಂದು ಹೇಳಿದೆ.

ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23ನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲು ನಿರ್ದೇಶಿಸುವಂತೆ ಕೋರಿ ವಕೀಲ ಕೆ.ಕೆ. ರಮೇಶ್ ಅವರು ಅರ್ಜಿ ಸಲ್ಲಿಸಿದ್ದರು.

Join Whatsapp
Exit mobile version