ಹೊಸದಿಲ್ಲಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಎಂಟು ಹಂತದಲ್ಲಿ ನಡೆಯುವ ಚುನಾವಣೆಯು ಬಿಜೆಪಿ ಷಡ್ಯಂತ್ರ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಹಾಕಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ ಎಂದು ANI ವರದಿ ಮಾಡಿದೆ.
ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳ ಚುನಾವಣೆ ನಡೆಸುವುದರ ಕುರಿತು ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ ಎಂದು ತಿಳಿದು ಬಂದಿದೆ. ಚುನಾವಣಾ ಆಯೋಗದ ಈ ಕುರಿತಾದಂತಹ ಆದೇಶವನ್ನು ತಡೆ ಹಿಡಿಯಬೇಕಾಗಿ ಅರ್ಜಿಯಲ್ಲಿ ತಿಳಿಸಲಾಗಿತ್ತು ಎನ್ನಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27ರಿಂದ ವಿಧಾನಸಭಾ ಚುನಾವಣೆಯು ಪ್ರಾರಂಭವಾಗಲಿದೆ. ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪರಸ್ಪರ ಜಿದ್ದಾಜಿದ್ದಿನಲ್ಲಿ ತೊಡಗಿವೆ.