ಭಾರತದಲ್ಲಿ ಮುಂದಿನ ವಾರ ಪೆಟ್ರೋಲ್, ಡೀಸೆಲ್ ಬೆಲೆ ಭಾರಿ ಹೆಚ್ಚಳ ಸಾಧ್ಯತೆ!

Prasthutha|

ನವದೆಹಲಿ: ರಷ್ಯಾ ಉಕ್ರೇನ್ ಮೇಲೆ ಮಾಡುತ್ತಿರುವ ಯುದ್ಧದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗುರುವಾರ ಪ್ರತಿ ಬ್ಯಾರೆಲ್‌ ಗೆ 115 ಡಾಲರ್ ದಾಟಿದೆ. ಈ ಮೂಲಕ ಭಾರತದಲ್ಲಿ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. 

- Advertisement -

ಕಳೆದ 120 ದಿನಗಳಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಆದರೆ ಕಚ್ಚಾ ತೈಲದ ಬೆಲೆ ಸುಮಾರು ಶೇ 70 ರಷ್ಟು ಹೆಚ್ಚಾಗಿದೆ. ಹೀಗಾಗಿ ಮುಂದಿನ ವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 20 ರಿಂದ 25 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ.

ಮೋದಿ ಸರ್ಕಾರವು ವಿಧಾನಸಭಾ ಚುನಾವಣೆಗೆ ಮುಂಚೆಯೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಿರಲಿಲ್ಲ. ಆದರೆ, ಚುನಾವಣೆ ಮುಗಿದ ಮೇಲೆ ಬೆಲೆ ಏರಿಕೆ ಮಾಡಲು ವಿಳಂಬ ಮಾಡುವುದಿಲ್ಲ. ಸದ್ಯ ದೇಶದ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದರ ಫಲಿತಾಂಶ ಮಾರ್ಚ್ 10 ರಂದು ಬರಲಿದೆ. ಹೀಗಾಗಿ ಮುಂದಿನ ವಾರದಿಂದ ಬೆಲೆ ಏರಿಕೆಯಾಗುವ ನಿರೀಕ್ಷೆ ಇದೆ.



Join Whatsapp
Exit mobile version