ಕೊಯಮತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

Prasthutha|

ಕೊಯಮತ್ತೂರು: ನಗರದ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ  ಸಾವು-ನೋವು ಸಂಭವಿಸಿಲ್ಲ

- Advertisement -

ನಗರದ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆಯುವ ಮೊದಲು ಕಚೇರಿ ಬಳಿ ಕೆಲವರು ಅನುಮಾನಾಸ್ಪದವಾಗಿ ಓಡಾಡಿಕೊಂಡಿದ್ದು ಕಂಡುಬಂದಿದೆ. ಘಟನೆಯಲ್ಲಿ ಯಾವುದೇ ಹಾನಿ ಅಥವಾ ಯಾರಿಗೂ ತೊಂದರೆಯೂ ಆಗಲಿಲ್ಲ. ಈ ರೀತಿ ಘಟನೆಯು ಬಿಜೆಪಿ ಕಾರ್ಯಕರ್ತರನ್ನು ತಡೆಯುವುದಿಲ್ಲ ಎಂದು ತಮಿಳುನಾಡಿನ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು ಟ್ವೀಟ್ ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೆಟ್ರೋಲ್ ತುಂಬಿದ ಬಾಟಲಿಯು ಪಕ್ಷದ ಕಚೇರಿಯ ಕೆಳಗೆ ಬಿದ್ದಿರುವುದು ಕಂಡುಬಂದಿದೆ.

Join Whatsapp