ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ಶುರುವಾಗಿದೆ ಈ ದಂಧೆ!

Prasthutha|

- Advertisement -

ಹೊಸದಿಲ್ಲಿ : ಭಾರತದಲ್ಲಿ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ದರ ದುಬಾರಿಯಾಗುತ್ತಿದ್ದಂತೆ ಇಂಧನ ಕಳ್ಳಸಾಗಣೆ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ನೇಪಾಳದಿಂದ ಆಗಮಿಸುತ್ತಿದ್ದ 1360 ಲೀಟರ್ ಡೀಸೆಲ್ ತುಂಬಿದ್ದ ದೊಡ್ಡ ಟ್ಯಾಂಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಭಾರತದ ಹಲವಾರು ಭಾಗದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 100 ರೂ. ಮತ್ತು ಅದಕ್ಕಿಂತ ಹೆಚ್ಚಾದ ಹಿನ್ನೆಲೆಯಲ್ಲಿ ಅಕ್ರಮ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿದೆ ಎಂದು ಗ್ಲೋಬಲ್ ಪೆಟ್ರೋಲ್ ಪ್ರೈಸಸ್ ಡಾಟ್ ಕಾಂ ಮಾಹಿತಿ ನೀಡಿದೆ.

- Advertisement -

ನೇಪಾಳ ಎಲ್ಲಾ ಪೆಟ್ರೋಲಿಯಂ ಉತ್ಪನ್ನ, ಇಂಧನಗಳನ್ನು ಭಾರತದಿಂದ ಆಮದು ಮಾಡಿಕೊಳ್ಳುತ್ತಿತ್ತು.  ಈಗ ತೆರಿಗೆ ವ್ಯತ್ಯಾಸದಿಂದಾಗಿ ನೇಪಾಳದಲ್ಲಿ ಭಾರತಕ್ಕಿಂತ ಪೆಟ್ರೋಲ್ ಬೆಲೆ ಕಡಿಮೆಯಾಗಿದ್ದು, ಈ ಕಾರಣದಿಂದ ಕಳ್ಳಸಾಗಣೆ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.

ಭಾರತದಲ್ಲಿ ತೆರಿಗೆ ಹೆಚ್ಚಾಗಿರುವ ಕಾರಣ ಇಂಧನ ಬೆಲೆ ಕೂಡ ಹೆಚ್ಚಾಗಿದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ಗ್ರಾಹಕರು ಪಾವತಿಸುವ ಹಣದಲ್ಲಿ ಶೇಕಡ 60 ರಷ್ಟು ತೆರಿಗೆ ಇದೆ ಎಂದು ಹೇಳಲಾಗುತ್ತಿದೆ.

Join Whatsapp