ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ| ‘ಸೈಕಲ್‌ನಲ್ಲಿ ಓಡಾಡಿದರೆ ರೋಗ ಬರಲ್ಲ’ ಎಂದ ಬಿಜೆಪಿ ಸಂಸದ

Prasthutha|

ದಾವಣಗೆರೆ: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತೆ. ರೋಗ ಬರಲ್ಲ ಎಂದು ದಾವಣಗೆರೆಯ ಬಿಜೆಪಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ ಪೆಟ್ರೋಲ್- ಡಿಸೇಲ್ ಬೆಲೆ ಏರಿಕೆ ಕುರಿತು ಕೇಳಲಾದ ಪ್ರಶ್ನೆಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

- Advertisement -

ಪೆಟ್ರೋಲ್-ಡಿಸೇಲ್ ದರ ದಿನದಿಂದ ದಿನಕ್ಕೆ ಏರಿಕೆಯಾಗುವುದರಿಂದ ಜನರು ಸೈಕಲ್ ಮೇಲೆ ಓಡಾಡುವ ಸ್ಥಿತಿ ಬಂದಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಸಂಸದರು, ಸೈಕಲ್‌ನಲ್ಲಿ ಓಡಾಡಿದರೆ ಏನ್ ಆಗುತ್ತೆ, ಒಳ್ಳೆಯ ವ್ಯಾಯಾಮ ಆಗುತ್ತೆ ಎಂದು ಲಘುವಾಗಿ ಉತ್ತರಿಸಿದ್ದಾರೆ.

ಬಳಿಕ ಮಾತನಾಡಿದ ಅವರು ಕಚ್ಚಾ ತೈಲದ ಬ್ಯಾರೆಲ್ ಬೆಲೆ ಜಾಸ್ತಿ ಆದಾಗ ದರ ಹೆಚ್ಚಾಗುವುದು ಸ್ವಾಭಾವಿಕ. ಬ್ಯಾರೆಲ್ ಬೆಲೆ ಕಡಿಮೆಯಾದಾಗ ಕಡಿಮೆ ಆಗುತ್ತೆ. ದರ ಕಡಿಮೆ ಮಾಡಲು ಪ್ರಧಾನಿ ಮೋದಿಯವರು ಸರ್ವ ಪ್ರಯತ್ನ ಮಾಡುತ್ತಾರೆ ಎಂದರು.

- Advertisement -

ರಾಜ್ಯಕ್ಕೆ ಸಿಗಬೇಕಾದ ಜಿಎಸ್‌ಟಿ ಪಾಲು ಸಿಗದೆ ಇರುವ ಬಗ್ಗೆ ಪ್ರತಿಕ್ರಿಯಿಸಿದ ಸಂಸದರು, ಅದನ್ನು ಹಣಕಾಸು ಸಚಿವರಿಗೆ ಕೇಳಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

Join Whatsapp