February 25, 2021

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ, ರಾಜ್ಯ ಸರ್ಕಾರಗಳು ಮುಂದಾಗಬೇಕು : RBI ಗವರ್ನರ್

ಮುಂಬೈ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಂಧನಕ್ಕೆ ವಿಧಿಸುತ್ತಿರುವ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಂತ್ ದಾಸ್ ಹೇಳಿದ್ದಾರೆ.

ತೈಲ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯ ಸಾಧಿಸಬೇಕಾದಂತಹ ಅವಶ್ಯಕತೆ ಇದೆ ಎಂದು ಅವರು ಹೇಳಿದ್ದಾರೆ.

ಇಂಧನ ಬೆಲೆ ಏರಿಕೆಯಿಂದ ಬೈಕ್, ಕಾರ್ ಬಳಕೆದಾರರ ಮೇಲೆ ಮಾತ್ರವಲ್ಲದೆ, ಉತ್ಪಾದನೆ, ಸಾರಿಗೆ ಇತರ ಕ್ಷೇತ್ರಗಳ ಮೇಲೆಯೂ ಪರಿಣಾಮ ಉಂಟಾಗಿದೆ. ಇಂಧನ ಬೆಲೆ ಏರಿಕೆಯಿಂದ ಎಲ್ಲವು ದುಬಾರಿಯಾಗಿದ್ದು, ಆರ್ಥಿಕತೆಯ ಮೇಲೆ ಬಹುದೊಡ್ಡ ಪರಿಣಾಮ ಬೀರಿವೆ. ಇದರ ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯತೆ ಸಾಧಿಸಿ ತೆರಿಗೆಯನ್ನು ಕಡಿತಗೊಳಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ದೇಶದ ಜನ ಸಂಕಷ್ಟದ ಜೀವನ ಸಾಗಿಸುತ್ತಿದ್ದು ಅದರಿಂದ ಹೊರಬರಲು ಸರ್ಕಾರಗಳು ಸಕಾರಾತ್ಮಕ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!