ಸತತ 13ನೇ ದಿನವೂ ಏರಿಕೆ ಕಂಡ ಪೆಟ್ರೋಲ್,ಡೀಸೆಲ್ ದರ

Prasthutha|

ನವದೆಹಲಿ: ಸತತ 13ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ ಕಂಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಗೆ 80 ಪೈಸೆ ಏರಿಕೆಯಾಗಿದೆ.

- Advertisement -

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ 108.99 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ದರ ರೂ. 92.83ಕ್ಕೆ ಏರಿಕೆಯಾಗಿದೆ. ಒಟ್ಟು ಕಳೆದ 13ದಿನದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 8ರೂ. ಏರಿಕೆಯಾಗಿದೆ. ಅತ್ತ ರಾಜಧಾನಿ ದೆಹಲಿಯಲ್ಲಿಯೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ. 103.41 ಏರಿಕೆಯಾಗಿದ್ದು, ಡೀಸೆಲ್ ಬೆಲೆ ರೂ.94.67 ದಾಖಲಾಗಿದೆ.

Join Whatsapp