ಪೆಟ್ರೋಲ್ 9.5, ಡೀಸೆಲ್ 7 ರೂ.ಇಳಿಕೆ

Prasthutha|

ನವದೆಹಲಿ: ದಿನೇ ದಿನೇ ಗಗನಕ್ಕೇರಿದ್ದ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 8 ಹಾಗೂ 6ರಷ್ಟು ಕಡಿತ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.

- Advertisement -

ಶನಿವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 8 ರಷ್ಟು ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ  6 ರಷ್ಟು ಕಡಿಮೆ ಮಾಡುತ್ತಿದ್ದೇವೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 9.5, ಡೀಸೆಲ್ ಬೆಲೆ 7 ರೂಪಾಯಿ ನಷ್ಟು ಇಳಿಕೆಯಾಗಲಿದೆ ಎಂದು ಅವರು ತಿಳಿಸಿದರು.   ಈ ವರ್ಷ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ ಗೆ (12 ಸಿಲಿಂಡರ್ ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನಾವು ನೀಡಲಿದ್ದೇವೆ ಎಂದು ಸಚಿವರು ಘೋಷಿಸಿದರು

ಪೆಟ್ರೋಲ್ ಬೆಲೆ 9 ರೂಪಾಯಿ 50 ಪೈಸೆ ಹಾಗೂ ಡೀಸಲ್ ದರ ಪ್ರತಿ ಲೀಟರ್‌ ಗೆ 7 ರೂಪಾಯಿ ಕಡಿಮೆಯಾಗಲಿದೆ. ಈ ತೀರ್ಮಾನದಿಂದ ಪ್ರತಿವರ್ಷ ಸರ್ಕಾರಕ್ಕೆ 1 ಲಕ್ಷ ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ಹೇಳಿದ್ದಾರೆ.

- Advertisement -

ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಅಡುಗೆ ಅನಿಲ ಸಿಲಿಂಡರ್ ಪಡೆದಿರುವ ಕುಟುಂಬಗಳಿಗೆ ವಾರ್ಷಿಕ 12  ಸಿಲಿಂಡರ್‌ಗಳ ಮಿತಿ ನಿಗದಿ ಪಡಿಸಿದ್ದು, ಪ್ರತಿ ಸಿಲಿಂಡರ್‌ಗೆ 200 ರೂಪಾಯಿ ಸಬ್ಸಿಡಿ ನೀಡಲು ತೀರ್ಮಾನಿಸಲಾಗಿದೆ ಇದರಿಂದ ಸರ್ಕಾರಕ್ಕೆ ಪ್ರತಿವರ್ಷ 6 ಸಾವಿರದ 100 ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ಹೇಳಿದ್ದಾರೆ.

ಕಬ್ಬಿಣ, ಉಕ್ಕು, ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಸ್ಟಂ ಸುಂಕವನ್ನು ಸಹ ತಗ್ಗಿಸಲಾಗಿದ್ದು, ಸಿಮೆಂಟ್ ಲಭ್ಯತೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Join Whatsapp