ಮತ್ತೆ ಏರಿಕೆಯತ್ತ ಪೆಟ್ರೋಲ್, ಡೀಸೆಲ್ ಬೆಲೆ! ಎಲ್ಲೆಲ್ಲಿ ಎಷ್ಟೆಷ್ಟು? ವಿವರ ಇಲ್ಲಿದೆ

Prasthutha: July 15, 2021

ದೆಹಲಿ: ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಇಂದು ಮತ್ತೆ ಏರಿಕೆ ಕಂಡಿದೆ. ಎರಡು ದಿನಗಳ ಕಾಲ ಸ್ಥಿರತೆಯಲ್ಲಿದ್ದ ತೈಲ ದರ ಇಂದು ಮತ್ತೆ ಹೆಚ್ಚಾಗಿದೆ. ಇಂದು ಲೀಟರ್ ಪೆಟ್ರೋಲ್ ದರದಲ್ಲಿ 34 ರಿಂದ 35 ಪೈಸೆ ಹೆಚ್ಚಳವಾಗಿದೆ. ಅದೇ ರೀತಿ ಲೀಟರ್ ಡೀಸೆಲ್ ರದಲ್ಲಿಯೂ 15 ರಿಂದ 16 ಪೈಸೆ ಹೆಚ್ಚಳ ಮಾಡಲಾಗಿದೆ.

ಎರಡು ದಿನಗಳ ಹಿಂದೆ ಡೀಸೆಲ್ ದರವನ್ನು ಕೊಂಚ ಇಳಿಕೆ ಮಾಡಲಾಗಿತ್ತು. ಹಾಗಾಗಿ ಇನ್ನಾದರೂ ಇಂಧನ ದರ ಕಡಿಮೆ ಆಗಬಹುದು ಎಂಬ ನಿರೀಕ್ಷೆ ವಾಹನ ಸವಾರರಿಗಿತ್ತು. ಆದರೆ ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳೆರಡೂ ಸಹ ಹೆಚ್ಚಳವಾಗಿದೆ.

ಮೇ 4ರಿಂದ ಏರಿಕೆ ಕಾಣುತ್ತಿರುವ ಪೆಟ್ರೊಲ್ ಮತ್ತು ಡೀಸೆಲ್ ದರ ಇಲ್ಲಿಯವರೆಗೆ 40 ಬಾರಿ ಹೆಚ್ಚಳ ಮಾಡಲಾಗಿದೆ. ಎಲ್ಲಾ ಪ್ರಮುಖ ಮೆಟ್ರೋ ನಗರಗಳು ಲೀಟರ್ ಪೆಟ್ರೋಲ್ ದರದಲ್ಲಿ ಶತಕ ಬಾರಿಸಿ ಮುನ್ನುಗ್ಗುತ್ತಿದೆ. ಹಾಗೆಯೇ ಡೀಸೆಲ್ ದರವೂ ಸಹ ಸಾರ್ವಕಾಲಿಕ ಗರಿಷ್ಟ ಮಟ್ಟ ತಲುಪಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.54 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.87 ರೂಪಾಯಿ ಆಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.54 ರೂಪಾಯಿ ಇದ್ದರೆ ಲೀಟರ್ ಡೀಸೆಲ್ ದರ 97.45 ರೂಪಾಯಿಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.94 ರೂಪಾಯಿಗೆ ಹೆಚ್ಚಳವಾಗಿದೆ. ಅದೇ ರೀತಿ ಲೀಟರ್ ಡೀಸೆಲ್ ದರ 95.26 ರೂಪಾಯಿಗೆ ಏರಿಕೆಯಾಗಿದೆ.
ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.23 ರೂಪಾಯಿ ಆಗಿದೆ. ಲೀಟರ್ ಡೀಸೆಲ್ ದರ 94.39 ರೂಪಾಯಿ ಆಗಿದೆ. ಇನ್ನು ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಗೆ 101.74 ರೂಪಾಯಿ ನಿಗದಿಯಾಗಿದ್ದರೆ, ಲೀಟರ್ ಡೀಸೆಲ್ ದರದಲ್ಲಿ 93.02 ರೂಪಾಯಿ ದಾಖಲಾಗಿದೆ.
ಹೈದರಾಬಾದ್ ನಲ್ಲಿ ಲೀಟರ್ ಪೆಟ್ರೋಲ್ ದರ 105.52 ರೂಪಾಯಿ ಆಗಿದೆ ಹಾಗೆಯೇ ಲೀಟರ್ ಡೀಸೆಲ್ ದರ 97.96 ರೂಪಾಯಿಗೆ ಏರಿಕೆಯಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ