ಮುಂಬೈ : ದೇಶದ ಜನತೆಗೆ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದರೂ, ಯಾರೊಬ್ಬರೂ ಈ ಬಗ್ಗೆ ತಲೆಕೆಡಿಸಿಕೊಳ್ಳದಿರುವುದು ಅಚ್ಚರಿಯನ್ನು ಮೂಡಿಸಿದೆ. ಒಂದೇ ವಾರದಲ್ಲಿ ನಾಲ್ಕು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಮೂಲಕ, ಮುಂಬೈಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 92.28 ರೂ. ಆಗಿದ್ದರೆ, ಡೀಸೆಲ್ ಬೆಲೆ 82.66 ರೂ.ಗೆ ಏರಿಕೆಯಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 85.70, ಡೀಸೆಲ್ ಬೆಲೆ 75.88 ರೂ.ಗೆ ಏರಿಕೆ ಯಾಗಿದೆ. ಅದರಲ್ಲಿ ಮಧ್ಯಪ್ರದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ ಈಗಾಗಲೇ ಲೀಟರ್ ಗೆ 95 ರೂ. ಗಡಿ ದಾಟಿದೆ.
ಮಧ್ಯಪ್ರದೇಶದ ಅನುಪುರದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 96.12 ರೂ. ಆಗಿದ್ದು, ಡೀಸೆಲ್ ಬೆಲೆ 95.57 ರೂ. ಆಗಿದೆ.
ಕರ್ನಾಟಕದ ಬೆಂಗಳೂರಿನಲ್ಲಿ ಪೆಟ್ರೋಲ್ ಗೆ ಲೀಟರ್ ಗೆ 89.09 ಮತ್ತು ಡೀಸೆಲ್ ಗೆ 88.41 ರೂ. ಆಗಿದೆ. ಬಳ್ಳಾರಿಯಲ್ಲಿ ಪೆಟ್ರೋಲ್ ಗೆ ಲೀಟರ್ ಗೆ 90.44 ಮತ್ತು ಡೀಸೆಲ್ ಗೆ 90.21 ರೂ. ಆಗಿದೆ. ಉತ್ತರ ಕನ್ನಡದಲ್ಲಿ ಪೆಟ್ರೋಲ್ ಗೆ ಲೀಟರ್ ಗೆ 90.60 ಮತ್ತು ಡೀಸೆಲ್ ಗೆ 89.25 ರೂ. ಆಗಿದೆ.