ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿರುವ ಬಜೆಟ್ ನಲ್ಲಿ ಮತ್ತೆ ಜನ ಸಾಮಾನ್ಯರ ಮೇಲೆ ದೊಡ್ಡ ಹೊರೆಬಿದ್ದಿದೆ.
ಪ್ರತಿ ಲೀಟರ್ ಪೆಟ್ರೋಲ್ ಗೆ 2.5 ರೂ. ಹಾಗೂ ಡೀಸೆಲ್ ಗೆ ರೂ. 4 ಏರಿಕೆಯಾಗಿದೆ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಪೆಟ್ರೋಲ್ ಮೇಲೆ 2.5 ರೂ. ಕೃಷಿ ಸೆಸ್ ಮತ್ತು ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲು ಮುಂದಾಗಿದೆ. ಹೀಗಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಲಿದೆ ಎನ್ನಲಾಗುತ್ತಿದೆ.
ತೈಲದ ಮೇಲಿನ ಸೆಸ್ ಏರಿಕೆಯಿಂದಾಗಿ ಮಧ್ಯಮ ವರ್ಗಗಳ ಜನರಿಗೆ ಮತ್ತಷ್ಟು ಹೊರೆ ನೀಡಿದೆ. ಈ ಮೂಲಕ ದಿನ ನಿತ್ಯದ ಸಾಮಗ್ರಿಗಳ ಬೆಲೆಯೂ ಏರಿಕೆಯಾಗಲಿದೆ. ಇದು ಜನರನ್ನು ಮತ್ತಷ್ಟು ಸಂಕಷ್ಟಕ್ಕೀಡಾದೀತು ಎಂದು ವಿಶ್ಲೇಷಿಸಲಾಗಿದೆ.