ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಂಗಳವಾರ ದೇಶಾದ್ಯಂತ 80 ಪೈಸೆ ಏರಿಕೆಯಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 96 ರೂಪಾಯಿ 21 ಪೈಸೆಯಾಗಿದೆ. ಈ ಹಿಂದೆ ಪೆಟ್ರೋಲ್ ಬೆಲೆ ದೆಹಲಿಯಲ್ಲಿ 95 ರೂಪಾಯಿ 41 ಪೈಸೆಯಾಗಿತ್ತು. ಡೀಸೆಲ್ ಬೆಲೆ 86 ರೂಪಾಯಿ 67 ಪೈಸೆಯಿಂದ 87 ರೂಪಾಯಿ 47 ಪೈಸೆಗೆ ಹೆಚ್ಚಳವಾಗಿದೆ.
ಅಲ್ಲದೆ, ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್ ಗೆ 50 ರೂಪಾಯಿ ಹೆಚ್ಚಳವಾಗಿದೆ.
ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಹಿಂದೇಟು ಹಾಕಿತ್ತು. ಚುನಾವಣಾ ಫಲಿತಾಂಶದ ಬಳಿಕ ಮತ್ತೆ ಹೆಚ್ಚಿಸಿದೆ.