ಪಿಎಫ್ಐ ಮತ್ತು ಅದರ 8 ಅಂಗ ಸಂಸ್ಥೆಗಳಿಗೆ 5 ವರ್ಷ ನಿಷೇಧ: ಕೇಂದ್ರ ಸರಕಾರ

Prasthutha|

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಅದರ 8 ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳವರೆಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿ ನಿಷೇಧ ಹೇರಿದೆ.

- Advertisement -


ಇತ್ತೀಚೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ಗುರಿಯಾಗಿಸಿ ದೇಶಾದ್ಯಂತ ಹಲವು ಪಿಎಫ್ಐ ಕಚೇರಿ ಮತ್ತು ನಾಯಕರ ಮನೆ ಮೇಲೆ ದಾಳಿ ಮಾಡಿತ್ತು. ನಿನ್ನೆಯೂ ಸಹ ಪಿಎಫ್ಐ ಗೆ ಸಂಬಂಧಿಸಿದ 150 ಕ್ಕೂ ಹೆಚ್ಚು ಜನರನ್ನು ಮಂಗಳವಾರ ಏಳು ರಾಜ್ಯಗಳಲ್ಲಿ ನಡೆದ ದಾಳಿಗಳಲ್ಲಿ ಬಂಧಿಸಲಾಗಿತ್ತು.

ಇದೀಗ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಅಂಗಸಂಸ್ಥೆಗಳಾದ ರೆಹಾಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್ (NWF), ಜೂನಿಯರ್ ಫ್ರಂಟ್ (JF), ಎಂಪವರ್ ಇಂಡಿಯಾ ಫೌಂಡೇಶನ್ (EIF) ಮತ್ತು ರಿಹಾಬ್ ಫೌಂಡೇಶನ್, ಕೇರಳ – ಸಹ ನಿಷೇಧಿಸಲಾಗಿದೆ. ಸಂಘಟನೆಯನ್ನು ಕೇಂದ್ರ ಸರಕಾರವು ಐದು ವರ್ಷಗಳವರೆಗೆ ನಿಷೇಧ ಹೇರಿದೆ.



Join Whatsapp