PFI ನಿಷೇಧ: ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

Prasthutha|

ಬೆಂಗಳೂರು: ಕೇಂದ್ರ ಸರ್ಕಾರ PFI ಸಂಘಟನೆಯ ಮೇಲೆ UAPA ಕಾಯ್ದೆ ಅಡಿಯಲ್ಲಿ ಹೇರಿದ್ದ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ತಿಗೊಳಿಸಿದ ಹೈಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ.

- Advertisement -

ಕೇಂದ್ರ ಸರ್ಕಾರದ ನಿಷೇಧ ಆದೇಶವನ್ನು ಪ್ರಶ್ನಿಸಿ ಪಿಎಫೈ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ನಾಸಿರ್ ಪಾಷಾ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.

ಕಾನೂನುಬಾಹಿರ ಸಂಘಟನೆ ಎಂದು ಉಲ್ಲೇಖಿಸಿ ಕೇಂದ್ರ ಸರ್ಕಾರ PFI ಅನ್ನು UAPA ಕಾಯ್ದೆ ಅಡಿಯಲ್ಲಿ ನಿಷೇಧ ಹೇರಿದ್ದು, ನಿಷೇಧಿಸಲು ನಿಖರ ಕಾರಣವನ್ನು ನೀಡಲಾಗಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಅಲ್ಲದೆ, ವಾದ ಮಂಡನೆಗೆ ಕಾಲಾವಕಾಶವನ್ನು ನೀಡದೇ PFI ಅನ್ನು ನಿಷೇಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

- Advertisement -

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಜಯಕುಮಾರ್ ಎಸ್. ಪಾಟೀಲ್ ಅವರು ವಾದ ಮಂಡಿಸಿದ್ದರು.

ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯದಲ್ಲಿ ವಾದಿಸಿದ್ದರು.

Join Whatsapp