PFI ನಿಷೇಧ: ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಮಾಯಾವತಿ

Prasthutha|

ಲಖನೌ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ಅದರ ಅದರ ಅಂಗಸಂಸ್ಥೆಗಳನ್ನು ನಿಷೇಧಿಸಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಮುಂಬರುವ ಹಲವು ರಾಜ್ಯಗಳಲ್ಲಿನ ಅಸೆಂಬ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಜರುಗಿಸಿದೆ ಎಂದು ತಿಳಿಸಿದ್ದಾರೆ.

- Advertisement -

ಟ್ವೀಟ್ ಮಾಡಿರುವ ಅವರು, ರಾಜಕೀಯ ಸ್ವಾರ್ಥದ ಭಾಗವಾಗಿ ಸರ್ಕಾರ ರಾಷ್ಟ್ರವ್ಯಾಪಿಯಾಗಿ ಪಿ.ಎಫ್.ಐ. ಮತ್ತು ಅದರ ಎಂಟು ಅಂಗ ಸಂಸ್ಥೆಗಳ ಮೇಲೆ ನಿಷೇಧ ಹೇರಿದೆ ಎಂದು ತಿಳಿಸಿದ್ದಾರೆ.

Join Whatsapp