ಪಿಎಫ್ ಐ ನಿಷೇಧ ಸ್ವಾಗತಾರ್ಹ: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಕೇಂದ್ರ ಸರಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ ಪಿಎಫ್ ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು ಐದು ವರ್ಷಗಳ ವರೆಗೆ UAPA ಕಾಯಿದೆ ಅಡಿಯಲ್ಲಿ ನಿಷೇಧಿಸಿದ್ದು, ಇದನ್ನು ನಾನು ಸ್ವಾಗತಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -

ದೇಶದಲ್ಲಿ ಕೋಮು ಸೌಹಾರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ. ಕೇಂದ್ರ ಸರಕಾರ ಬಲವಾದ ಸಾಕ್ಷ್ಯಾಧಾರ ಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.

Join Whatsapp