ಕಾರ್ಯಕರ್ತರಿಗೆ ಮಾರಕಾಸ್ತ್ರ ವಿತರಿಸಿ ಜನರಲ್ಲಿ ಆತಂಕ ಸೃಷ್ಟಿಸಿದ ಸಂಘಪರಿವಾರದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ : ಪಾಪ್ಯುಲರ್ ಫ್ರಂಟ್

Prasthutha|

ಮಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿಯವರು ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿದ ಬೆನ್ನಿಗೇ ಮಂಗಳೂರಿನಲ್ಲಿ ಸಂಘಪರಿವಾರವು ತನ್ನ ಕಾರ್ಯಕರ್ತರಿಗೆ ಮಾರಕಾಸ್ತ್ರ ವಿತರಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದ ಸಂಘಪರಿವಾರದ ನಾಯಕರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ.ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಆಗ್ರಹಿಸಿದ್ದಾರೆ.

- Advertisement -


ಆಯುಧ ಪೂಜೆಯ ಹೆಸರಿನಲ್ಲಿ ವಿಶ್ವ ಹಿಂದೂ ಪರಿಷತ್ ನೂರಾರು ಕಾರ್ಯಕರ್ತರಿಗೆ ತ್ರಿಶೂಲವನ್ನು ವಿತರಿಸಿದೆ. ಇದು ಜಿಲ್ಲೆಯಲ್ಲಿ ಮತ್ತಷ್ಟು ಶಾಂತಿ ಕದಡುವ ಮುನ್ಸೂಚನೆಯನ್ನು ನೀಡುತ್ತಿದೆ. ಕಾನೂನಿನ ಯಾವುದೇ ನಿಯಂತ್ರಣವಿಲ್ಲದಿರುವುದರಿಂದ ಸಂಘಪರಿವಾರದ ಕಾರ್ಯಕರ್ತರು ತಮ್ಮ ದುಷ್ಕೃತ್ಯವನ್ನು ನಿರಾತಂಕವಾಗಿ ನಡೆಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಿರಂತರವಾಗಿರುವ ನಡೆಯುತ್ತಿರುವ ಯುವಕ ಯುವತಿಯರ ಮೇಲೆ ನಡೆಯುತ್ತಿರುವ ಹಲ್ಲೆ ಘಟನೆಗಳು, ಕ್ಷುಲ್ಲಕ ಕಾರಣಕ್ಕಾಗಿ ಮುಸ್ಲಿಮ್ ಯುವಕರ ಮೇಲಿನ ದಾಳಿಗಳು ಸಂಘಪರಿವಾರದ ಶಾಂತಿ ಕದಡುವ ಹುನ್ನಾರವನ್ನು ಈಗಾಗಲೇ ಬಹಿರಂಗಪಡಿಸಿದೆ. ವಾಸ್ತವ ಸಂಗತಿ ಹೀಗಿದ್ದರೂ ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿಯವರು ಸಂಘಪರಿವಾರದ ದುಷ್ಕೃತ್ಯಗಳನ್ನು ಸಮರ್ಥಿಸಿರುವುದು ಆಘಾತಕಾರಿಯಾಗಿದೆ. ಮಾತ್ರವಲ್ಲ, ಇದು ಪೊಲೀಸರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಪ್ರಯತ್ನವೂ ಆಗಿದೆ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಕೋವಿಡ್ ಸಂಕಷ್ಟದಿಂದ ಜಿಲ್ಲೆಯ ಜನರು ಮೆಲ್ಲನೆ ಚೇತರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಜಿಲ್ಲೆಯಲ್ಲಿ ನಡೆಯುತ್ತಿರುವ ಸಂಘಪರಿವಾರದ ಆಟಾಟೋಪವು ಜನರನ್ನು ಮತ್ತೊಮ್ಮೆ ಆತಂಕಕ್ಕೆ ದೂಡುತ್ತಿದೆ. ನಾಗರಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಪ್ರಭಾವಕ್ಕೊಳಗಾಗದೇ ನಿಷ್ಪಕ್ಷಪಾತವಾಗಿ ಕಾರ್ಯಾಚರಿಸಬೇಕು. ತ್ರಿಶೂಲ ವಿತರಿಸಿ ಜನರನ್ನು ಭೀತಿಗೊಳಪಡಿಸಿದ ಸಂಘಪರಿವಾರದ ನಾಯಕರ ವಿರುದ್ಧ ಪ್ರಕರಣ ದಾಖಲಿಸಬೇಕು. ಸಂಘಪರಿವಾರದ ದುಷ್ಕೃತ್ಯಗಳಿಗೆ ಕಡಿವಾಣ ಹಾಕಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಬೇಕೆಂದು ಇಜಾಝ್ ಅಹ್ಮದ್ ಒತ್ತಾಯಿಸಿದ್ದಾರೆ.

Join Whatsapp