ಮಂಗಳೂರು: ಎನ್ ಐಎ ದಾಳಿ ಖಂಡಿಸಿ ಪ್ರತಿಭಟಿಸಿದ PFI, SDPI ನಾಯಕರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ ಪೊಲೀಸರು

Prasthutha|

ಮಂಗಳೂರು: NIA ದಾಳಿ ಮತ್ತು ಪಿಎಫ್ ಐ ನಾಯಕರ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ಎಸ್ ಡಿಪಿಐ, ಪಿಎಫ್ ಐ ನಾಯಕರ ಮನೆ ಮೇಲೆ ಮಂಗಳವಾರ ಬೆಳಗ್ಗಿನ ಜಾವ ಪೊಲೀಸರು ದಾಳಿ ನಡೆಸಿ ಹಲವು ಮುಖಂಡರನ್ನು ಬಂಧಿಸಿದ್ದಾರೆ.
ಬಂಧಿತ ಪಿಎಫ್ಐ ನಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಇತ್ತೀಚೆಗೆ ಪ್ರತಿಭಟನೆ ನಡೆಸಲಾಗಿತ್ತು.
ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿ ಇದ್ದವರನ್ನು ಗುರುತಿಸಿ ಅವರ ಮೇಲೆ 107 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಉಳ್ಳಾಲ, ಪಾಂಡೇಶ್ವರ, ಕುದ್ರೋಳಿ ಸೇರಿ ಹಲವೆಡೆ ಪೊಲೀಸರು ಬೆಳಗ್ಗಿನ ಜಾವ 4.30ರ ಸುಮಾರಿಗೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಪೊಲೀಸರ ಕ್ರಮ ಅತಿರೇಕದ್ದು ಮತ್ತು ಕಾನೂನು ಬಾಹಿರ ಎಂದು ಪಿಎಫ್ ಐ ನಾಯಕರು ಪ್ರತಿಕ್ರಿಯಿಸಿದ್ದಾರೆ.