Home ಟಾಪ್ ಸುದ್ದಿಗಳು PFI ಮುಖಂಡರ ಮನೆ ಮೇಲೆ ಮತ್ತೆ ದಾಳಿ: ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿ ರಾಜ್ಯದ ಹಲವೆಡೆ...

PFI ಮುಖಂಡರ ಮನೆ ಮೇಲೆ ಮತ್ತೆ ದಾಳಿ: ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿ ರಾಜ್ಯದ ಹಲವೆಡೆ ಶೋಧ

ಬೆಂಗಳೂರು: ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಏಕಕಾಲದಲ್ಲಿ ಇತ್ತೀಚೆಗೆ ಕೇಂದ್ರ ಸರ್ಕಾರದಿಂದ ನಿಷೇಧಿಸಲ್ಪಟ್ಟ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾದಳ (ಎನ್ಐಎ)ದ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯ, ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಪಿಎಫ್ ಐ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ.
ಅಲ್ಲದೇ ದಾಳಿಯ ವೇಳೆ ಕೆಲ ಪಿಎಫ್ಐ ಮುಖಂಡರನ್ನು ವಿಚಾರಣೆ ನಡೆಸಿ ತಲೆಮರೆಸಿಕೊಂಡಿರುವ ಕೆಲ ಪಿಎಫ್ಐ ಮುಖಂಡರ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.


ಮೈಸೂರಿನಲ್ಲಿ ಎನ್ಐಎ ಅಧಿಕಾರಿಗಳು, ಪಿಎಫ್ಐ ಮಾಜಿ ಕಾರ್ಯದರ್ಶಿ ಸುಲೈಮಾನ್ ಎಂಬವರನ್ನು ಬಂಧಿಸಿ ಮಂಡಿ ಮೊಹಲ್ಲಾದಲ್ಲಿರುವ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ.
ಮುಂಜಾನೆ ದಿಢೀರ್ ದಾಳಿ ಮಾಡಿ ಸುಲೈಮಾನ್ ರನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿ ಮಾಹಿತಿಯನ್ನು ಸಂಗ್ರಹಿಸ ತೊಡಗಿದ್ದಾರೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಬೆಳ್ಳಾರೆ ಗ್ರಾ.ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ, ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾರನ್ನು ವಶಕ್ಕೆ ಪಡೆದಿದ್ದಾರೆ.


ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿ ಉಳಿದ ಆರೋಪಿಗಳ ಬಂಧನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುತ್ತಮುತ್ತ ಎನ್ಐಎ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.

Join Whatsapp
Exit mobile version