PFI ಸಂಘಟನೆಯ ಬ್ಯಾಂಕ್ ಖಾತೆ ತಾತ್ಕಾಲಿಕ ಸ್ಥಗಿತ | ಇಡಿ ಇಲಾಖೆಯ ವಿರುದ್ಧ ರಾಜ್ಯದೆಲ್ಲೆಡೆ ಪ್ರತಿಭಟನೆ

Prasthutha|

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಇಡಿ ಇಲಾಖೆಯ ನಡೆಯನ್ನು ವಿರೋಧಿಸಿ PFI ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ ಹಮ್ಮಿಕೊಂಡಿತ್ತು.

- Advertisement -

ದೇಶದೆಲ್ಲೆಡೆ ಕಾರ್ಯಾಚರಿಸುವ PFI ಸಂಘಟನೆಯ ಸುಮಾರು 23 ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆಯ ಆರೋಪ ಹೊರಿಸಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಇದನ್ನು ವಿರೋಧಿಸಿ PFI ಬೆಂಗಳೂರು, ಮೈಸೂರು, ಶಿವಮೊಗ್ಗ, ಮಡಿಕೇರಿ, ಮಂಗಳೂರು ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ಬಿಜೆಪಿ ಮತ್ತು ಆರೆಸ್ಸೆಸ್ ನ ಕೈಗೊಂಬೆಯಾಗಿರುವ ಇಡಿ ಇಲಾಖೆಯು, PFI ಅನ್ನು ಹಲವು ವರ್ಷಗಳಿಂದ ಗುರಿಯಾಗಿಸಿಕೊಂಡಿದ್ದು, ಇದರ ವಿರುದ್ಧ PFI ಕಾನೂನು ಹೋರಾಟ ನಡೆಸಲಿದೆ ಎಂದು ಮುಖಂಡರು ತಿಳಿಸಿದ್ದಾರೆ.

Join Whatsapp