PFIಯಿಂದ ಎಸ್ ಪಿ ಕಚೇರಿ ಚಲೋ: ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Prasthutha|

ಮಂಗಳೂರು: ಉಪ್ಪಿನಂಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಪಿಎಫ್ ಐ ಸಂಘಟನೆಯ ಕಾರ್ಯಕರ್ತರ ಮೇಲೆ, ಪೊಲೀಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಿ ಇಂದು( ಶುಕ್ರವಾರ) ಮಧ್ಯಾಹ್ನ 3 ಗಂಟೆಗೆ ಎಸ್.ಪಿ. ಕಚೇರಿ ಚಲೋ ಹಮ್ಮಿಕೊಳ್ಳಲಾಗಿದ್ದು, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.  

- Advertisement -

ಮಂಗಳೂರು ‌ಕಮಿಷನರ್ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ನಗರದ ಪೊಲೀಸರು ಸೇರಿದಂತೆ ಹೆಚ್ಚುವರಿಯಾಗಿ 4 ಕೆಎಸ್​ ಆರ್ ​ಪಿ ತುಕಡಿ, 5 ಸಿಎಆರ್ ಸೇರಿದಂತೆ 600ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಕ್ಲಾಕ್ ಟವರ್, ಎಸ್​ಪಿ ಕಚೇರಿ, ಕಮಿಷನರ್ ಕಚೇರಿ ಸೇರಿದಂತೆ ನಗರದಾದ್ಯಂತ ಕಟ್ಟುನಿಟ್ಟಿನ ಭದ್ರತೆ ವಹಿಸಲಾಗಿದೆ.

Join Whatsapp