ಅಸ್ಸಾಮ್ ಪೊಲೀಸರಿಂದ ಅಮಾಯಕ ಮುಸ್ಲಿಮರ ಹತ್ಯೆ: ಪಿ.ಎಫ್.ಐ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ

Prasthutha|

ಮಂಗಳೂರು: ಅಸ್ಸಾಂನಲ್ಲಿ ಒಕ್ಕಲೆಬ್ಬಿಸುವ ನೆಪದಲ್ಲಿ ಮುಸ್ಲಿಮರ ವಿರುದ್ಧ ದೌರ್ಜನ್ಯವೆಸಗಿದ ಪೊಲೀಸರ ನಡೆಯನ್ನು ಖಂಡಿಸಿ ಇಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ.

ಅಸ್ಸಾಂ ಸರ್ಕಾರದ ದ್ವಿಮುಖ ಧೋರಣೆಯಿಂದಾಗಿ ಬೀದಿಪಾಲಾಗಿದ್ದ ಜನತೆಯನ್ನು ಬಲವಂತದಿಂದ ಒಕ್ಕಲೆಬ್ಬಿಸುವ ಕ್ರಮವನ್ನು ಖಂಡಿಸಿ ನಿನ್ನೆ ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರು ಶೂಟೌಟ್ ನಡೆಸಿ ಇಬ್ಬರನ್ನು ಹತ್ಯೆ ಮಾಡಿದ್ದರು. ಮಾತ್ರವಲ್ಲ ಸಾವಿರಾರು ಮಂದಿಯನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ.

- Advertisement -

ನಿರಾಯುಧ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ನಡೆಸಿದ ಈ ದುಷ್ಕೃತ್ಯ ಮತ್ತು ದೌರ್ಜನ್ಯವನ್ನು ಖಂಡಿಸಿ ರಾಜ್ಯದೆಲ್ಲೆಡೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇಂದು ಪ್ರತಿಭಟನೆ ನಡೆಸಿದೆ. ಇದರ ಭಾಗವಾಗಿ ಪಾಪ್ಯುಲರ್ ಫ್ರಂಟ್ ನ ಕಾರ್ಯಕರ್ತರು ರಾಜ್ಯದ ವಿವಿಧೆಡೆಯಲ್ಲಿ ಮಸ್ಜಿದ್ ನ ಮುಂಭಾಗದಲ್ಲಿ ಬಿತ್ತಿಪತ್ರಗಳನ್ನು ಪ್ರದರ್ಶಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ನಗರದ ನೆಲ್ಲಿಕ್ಕಾಯಿ ರಸ್ತೆಯ ಇಬ್ರಾಹಿಂ ಖಲೀಲ್ ಮಸ್ಜಿದ್ ಮುಂಭಾಗ ಪಿ.ಎಫ್.ಐ ಕಾರ್ಯಕರ್ತರು ಬಿತ್ತಿಪತ್ರಗಳನ್ನು ಪ್ರದರ್ಶಿಸಿ ಅಸ್ಸಾಂ ಪೊಲೀಸರ ವಿರುದ್ಧ ತಮ್ಮ ಆಕ್ರೋಶ ವ್ಯಕಪಡಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪಾಪ್ಯುಲರ್ ಫ್ರಂಟ್ ಮುಖಂಡ ತುಫೈಲ್ ಅತೂರ್ ” ಅಸ್ಸಾಂ ಜನತೆಯನ್ನು ಗುರಿಯಾಗಿಸಿ ಸರ್ಕಾರ ನಡೆಸುತ್ತಿರುವ ದೌರ್ಜನ್ಯ ಖಂಡನೀಯ. ತನ್ನದೇ ನಾಗರಿಕ ಮೇಲೆ ಅಸ್ಸಾಂ ಪೊಲೀಸರು ಶೂಟೌಟ್ ನಡೆಸಿ ಇಬ್ಬರನ್ನು ಕೊಂದು, ಸಾವಿರಾರು ಜನರ ಮೇಲೆ ದೌರ್ಜನ್ಯ ನಡೆಸಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ದೇಶದಲ್ಲಿ ಆಂತರಿಕ ಕಲಹ ಏರ್ಪಡುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ರಾಷ್ಟ್ರದ ಆಡಳಿತ ವ್ಯವಸ್ಥೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಜರುಗಿಸಲಿ” ಎಂದು ಒತ್ತಾಯಿಸಿದ್ದಾರೆ.

- Advertisement -