ಕಾಲೇಜು, ವಿಶ್ವವಿದ್ಯಾಲಯದ ಶಿಕ್ಷಕರಿಗೆ ಪಿಎಚ್‌ಡಿ ಕಡ್ಡಾಯವಲ್ಲ: ಕೇಂದ್ರ ಸರ್ಕಾರ

Prasthutha|

ಹೊಸದಿಲ್ಲಿ: ಸರ್ಕಾರಿ, ಅನುದಾನಿತ ಕಾಲೇಜು ಮತ್ತು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಿಗೆ ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಪಿಎಚ್‌ಡಿ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

- Advertisement -

ಸಹಾಯಕ ಪ್ರಾಧ್ಯಾಪಕರಿಗೆ UGCಯು 2018ರಲ್ಲಿ PHD ಕಡ್ಡಾಯಗೊಳಿಸಿತ್ತು. ಶಿಕ್ಷಕರಿಗೆ ತಮ್ಮ ಪಿಎಚ್‌ಡಿ ಪೂರ್ಣಗೊಳಿಸಲು ಯುಜಿಸಿ ಮೂರು ವರ್ಷಗಳ ಕಾಲಾವಕಾಶ ನೀಡಿತ್ತು. ನಂತರ 2021-22 ಶೈಕ್ಷಣಿಕ ವರ್ಷದಿಂದ ಪಿಎಚ್‌ಡಿ ಕಡ್ಡಾಯಗೊಳಿಸಲಾಗಿತ್ತು. ಈ ನಿರ್ಧಾರದಲ್ಲಿ ಈ ವರ್ಷಕ್ಕೆ ರಿಯಾಯಿತಿ ನೀಡಲಾಗಿದೆ.

ಕೋವಿಡ್ ನಿಂದಾಗಿ ಪಿಎಚ್‌ಡಿ ಪೂರ್ಣಗೊಳಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯದ ಶಿಕ್ಷಕರು ಸೇರಿದಂತೆ ಅನೇಕರು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು.

Join Whatsapp