ನವದೆಹಲಿ: ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪಿಹೆಚ್.ಡಿ ಮಾನದಂಡ ಅಲ್ಲ ಎಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗ ತಿಳಿಸಿದೆ.
- Advertisement -
ಈ ಹುದ್ದೆ ನೇಮಕಾತಿಗೆ ಪಿಹೆಚ್.ಡಿ ಕಡ್ಡಾಯಗೊಳಿಸುವ ತನ್ನ ನಿರ್ಧಾರವನ್ನು ಯುಜಿಸಿ ಹಿಂತೆಗೆದುಕೊಂಡಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇರ ನೇಮಕಾತಿಗೆ ನೆಟ್, ಸೆಟ್, ಸ್ಲೆಟ್ ನಂತಹ ಪರೀಕ್ಷೆಗಳು ಕನಿಷ್ಠ ಮಾನದಂಡವಾಗಿರುತ್ತದೆ ಎಂದು ಯುಜಿಸಿ ಮೂಲಗಳು ತಿಳಿಸಿವೆ.