ಮಣಿಲಾ : ಫಿಲಿಫೈನ್ಸ್ ನ ದಕ್ಷಿಣ ಭಾಗದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3ರಷ್ಟು ತೀವ್ರತೆ ದಾಖಲಾಗಿದೆ. ಬೆಳಗ್ಗೆ 5:15ರ ಸುಮಾರಿಗೆ ಈ ಭೂಕಂಪ ಸಂಭವಿಸಿದ್ದು, ಸದ್ಯಕ್ಕೆ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಆದರೆ, ಫಿಲಿಫೈನ್ಸ್ ನ ರಾಜಧಾನಿ ಮಣಿಲಾದಲ್ಲಿ ಕೆಲವು ಕಟ್ಟಡಗಳು ನೆಲಸಮಗೊಂಡಿದ್ದು, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.
ಫಿಲಿಫೈನ್ಸ್ ನ ಮಿಂಡೊರೊ ಪ್ರದೇಶದಲ್ಲಿಯೂ ಇದೇ ತೀವ್ರದ ಭೂಕಂಪವಾಗಿದೆ. ಭೂಮಿಯ ಮೇಲ್ಮೈಯಿಂದ 144 ಕಿ.ಮೀ. ಆಳದಲ್ಲಿ ಭೂಕಂಪನವಾಗಿದೆ ಎಂದು ಇಎಂಎಸ್ಸಿ ಮೂಲಗಳು ತಿಳಿಸಿವೆ.
ಹಾನಿಗೊಳಗಾದ ಪ್ರದೇಶಗಳಿಗೆ ರಕ್ಷಣಾ ತಂಡಗಳು ಭೇಟಿ ನೀಡಿದ್ದು, ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ದವರ ರಕ್ಷಣೆಗೆ ಮುಂದಾಗಿದೆ.