Home ಟಾಪ್ ಸುದ್ದಿಗಳು ಫಿಲಿಫೈನ್ಸ್ ನಲ್ಲಿ ಪ್ರಬಲ ಭೂಕಂಪ | ಹಲವು ಕಟ್ಟಡಗಳು ನೆಲಸಮ; ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ...

ಫಿಲಿಫೈನ್ಸ್ ನಲ್ಲಿ ಪ್ರಬಲ ಭೂಕಂಪ | ಹಲವು ಕಟ್ಟಡಗಳು ನೆಲಸಮ; ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು

ಮಣಿಲಾ : ಫಿಲಿಫೈನ್ಸ್ ನ ದಕ್ಷಿಣ ಭಾಗದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3ರಷ್ಟು ತೀವ್ರತೆ ದಾಖಲಾಗಿದೆ. ಬೆಳಗ್ಗೆ 5:15ರ ಸುಮಾರಿಗೆ ಈ ಭೂಕಂಪ ಸಂಭವಿಸಿದ್ದು, ಸದ್ಯಕ್ಕೆ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಆದರೆ, ಫಿಲಿಫೈನ್ಸ್ ನ ರಾಜಧಾನಿ ಮಣಿಲಾದಲ್ಲಿ ಕೆಲವು ಕಟ್ಟಡಗಳು ನೆಲಸಮಗೊಂಡಿದ್ದು, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

ಫಿಲಿಫೈನ್ಸ್ ನ ಮಿಂಡೊರೊ ಪ್ರದೇಶದಲ್ಲಿಯೂ ಇದೇ ತೀವ್ರದ ಭೂಕಂಪವಾಗಿದೆ. ಭೂಮಿಯ ಮೇಲ್ಮೈಯಿಂದ 144 ಕಿ.ಮೀ. ಆಳದಲ್ಲಿ ಭೂಕಂಪನವಾಗಿದೆ ಎಂದು ಇಎಂಎಸ್ಸಿ ಮೂಲಗಳು ತಿಳಿಸಿವೆ.

ಹಾನಿಗೊಳಗಾದ ಪ್ರದೇಶಗಳಿಗೆ ರಕ್ಷಣಾ ತಂಡಗಳು ಭೇಟಿ ನೀಡಿದ್ದು, ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ದವರ ರಕ್ಷಣೆಗೆ ಮುಂದಾಗಿದೆ.

Join Whatsapp
Exit mobile version