Home ಕರಾವಳಿ ಮಂಗಳೂರು | ವೈದ್ಯನಿಂದ ಮಹಿಳಾ ಸಿಬ್ಬಂದಿಗಳೊಂದಿಗೆ ಚೆಲ್ಲಾಟದ ಫೋಟೋ ವೈರಲ್

ಮಂಗಳೂರು | ವೈದ್ಯನಿಂದ ಮಹಿಳಾ ಸಿಬ್ಬಂದಿಗಳೊಂದಿಗೆ ಚೆಲ್ಲಾಟದ ಫೋಟೋ ವೈರಲ್

ಮಂಗಳೂರು: ಮಂಗಳೂರಿನ ಆಯುಷ್ಮಾನ್ ನೋಡಲ್ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗಳೊಂದಿಗೆ ಚೆಲ್ಲಾಟವಾಡುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ. ದ.ಕ ಜಿಲ್ಲೆಯ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ, ಆಯುಷ್ಮಾನ್ ನೋಡಲ್ ಆಫೀಸರ್, ಕಚೇರಿ ಮಹಿಳಾ ಸಿಬ್ಬಂದಿ ಜತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ವರದಿ ಆಗಿದೆ. ಚೆಲ್ಲಾಟವಾಡುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ‌.

ಇತರ ಸಿಬ್ಬಂದಿಗಳ ಸಮ್ಮುಖದಲ್ಲಿ ಮಹಿಳಾ ಸಿಬ್ಬಂದಿ ಜತೆಗೆ ಈ ಅಧಿಕಾರಿ ಅಸಭ್ಯ ವರ್ತನೆ ಮಾಡಿದ್ದಾರೆ. ಹಾಡಹಗಲೇ ಕಚೇರಿಯಲ್ಲಿ ಚೆಲ್ಲಾಟವಾಡುತ್ತಿರುವ ದೃಶ್ಯಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ.
ಮಹಿಳಾ ಸಿಬ್ಬಂದಿಗಳ ಜತೆಗೆ ಚೆಲ್ಲಾಟವಾಡುತ್ತಿದ್ದ ಡಾ.ರತ್ನಾಕರ್ ಸಹಕರಿಸದ ಮಹಿಳಾ ಸಿಬ್ಬಂದಿಗಳಿಗೆ ಟಾರ್ಚರ್ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

Join Whatsapp
Exit mobile version