ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಕ ಬಂಧನ

Prasthutha|

ಮುಂಬೈ: ಉಲ್ಲಾಸ್ ನಗರ ಟೌನ್ ಶಿಪ್ ನಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಏಳು ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದೈಹಿಕ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -


ಶಾಲಾ ಆವರಣದಲ್ಲಿ ಶಿಕ್ಷಕ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ ಎಂದು ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪೋಷಕರು ನೀಡಿರುವ ದೂರು ಆಧರಿಸಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ ಎಸ್) ಮತ್ತು ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.



Join Whatsapp
Exit mobile version