ಚೊಂಬನ್ನು ಅರಗಿಸಿಕೊಳ್ಳಲಾಗದ ಬಿಜೆಪಿಯಿಂದ ಪಿಕ್ ಪಾಕೆಟ್ ಜಾಹೀರಾತು: ಡಿಕೆಶಿ ತಿರುಗೇಟು

Prasthutha|

ಬೆಂಗಳೂರು: ಕಾಂಗ್ರೆಸ್ ಪಿಕ್ ಪಾಕೆಟ್ ಮಾಡುತ್ತಿದೆ ಎಂದು ಟೀಕಿಸಿ ಬಿಜೆಪಿ ನೀಡಿರುವ ಜಾಹೀರಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

- Advertisement -


ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ನೀಡಿರುವ ಚೊಂಬಿನ ಜಾಹೀರಾತನ್ನು ಅರಗಿಸಿಕೊಳ್ಳುವುದು ಬಿಜೆಪಿಯವರಿಂದ ಇನ್ನೂ ಸಾಧ್ಯವಾಗಿಲ್ಲ. ಹಾಗಾಗಿ ನಮ್ಮ ಮೇಲೆ ಆರೋಪ ಮಾಡಿ ಜಾಹೀರಾತು ನೀಡುತ್ತಿದ್ದಾರೆ ಎಂದು ಹೇಳಿದರು. ನಾವು ಪಿಕ್ಪಾಕೆಟ್ ಮಾಡಿದ್ದೇವೆ ಅಂತ ಜಾಹೀರಾತು ನೀಡಿದ್ದಾರೆ. ಬಿಜೆಪಿಯವರು ಮಾಡಿದ ಪಿಕ್ ಪಾಕೆಟ್ ನಮ್ಮ ಮೇಲೆ ಹಾಕ್ತಿದ್ದಾರೆ. ಬಿಜೆಪಿಯವರಿಗೆ ನಾವು ನೀಡಿದ ಚೊಂಬನ್ನು ಅರಗಿಸಿಕೊಳ್ಳಲು ಆಗ್ತಿಲ್ಲ. ಬರ ಪರಿಹಾರ ನೀಡುವುದಾಗಿ ಕೇಂದ್ರ ಹೇಳಿದೆ, ನಮಗೆ ಪರಿಹಾರ ಸಿಗುತ್ತೆ. ನಮಗೆ ನ್ಯಾಯ ಸಿಗುತ್ತೆ. ಸಾಂಕೇತಿಕವಾಗಿ ಹೋರಾಟ ಪ್ರಾರಂಭಿಸಿದ್ದೇವೆ ಎಂದು ಅವರು ಹೇಳಿದರು.

Join Whatsapp