ಕಾರವಾರ: ಹಂದಿಯೊಂದನ್ನು ನಾಡಬಾಂಬ್ ಇಟ್ಟು ಹತ್ಯೆಗೈದಿರುವ ಘಟನೆ ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮದಲ್ಲಿ ನಡೆದಿತ್ತು. ಇದೀಗ ಅದೇ ಪ್ರದೇಶದಲ್ಲಿ ಪೊಲೀಸರು ಸಜೀವ ಬಾಂಬ್ ಪತ್ತೆ ಮಾಡಿದ್ದು, ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಪರಿಶೀಲನೆ ನಡೆಸಿದೆ.
ಚೆಂಡಿಯಾದ ಸ್ಮಶಾನದ ಬಳಿ ಆಗಸ್ಟ್ 4 ರಂದು ನಾಡಬಾಂಬ್ ಸ್ಫೋಟವಾಗಿ ಹಂದಿಯೊಂದು ಸಾವನ್ನಪ್ಪಿತ್ತು. ಈ ಹಂದಿ ಗ್ರಾಮಸ್ಥರೊಂದಿಗೆ ಒಡನಾಟ ಹೊಂದಿತ್ತು. ಅದರ ಸಾವಿನಿಂದ ಇಲ್ಲಿನ ಜನರು ತೀವ್ರ ದುಃಖಿತರಾಗಿದ್ದರು. ಅಲ್ಲದೆ, ತಕ್ಷಣ ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಈ ಕುರಿತು ಮಾಹಿತಿ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೀಫ್ರನ್ ಥಾಮಸ್ ಫರ್ನಾಂಡಿಸ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದರು.
ಇದರ ಬೆನ್ನಲ್ಲೇ ನಾಡಬಾಂಬ್ ಸ್ಫೋಟವಾದ ಪ್ರದೇಶದಲ್ಲಿಯೇ ಮತ್ತೊಂದು ನಾಡಬಾಂಬ್ ಪತ್ತೆಯಾಗಿದೆ. ಸ್ಥಳದಲ್ಲಿ ಮಂಗಳೂರು ಪೊಲೀಸರು ಬ್ಯಾರಿಕೇಡ್ ಹಾಕಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.