ಪೆಗಾಸೆಸ್ ಕುರಿತು ಸಿಟ್ ತನಿಖೆ ಕೋರಿ ಸುಪ್ರೀಂ ಕೋರ್ಟ್ ಗೆ ಪಿಐಎಲ್

Prasthutha|

ನವದೆಹಲಿ, ಜುಲೈ 22: ದೇಶಾದ್ಯಂತ ಸಂಚಲನ ಮೂಡಿಸಿದ್ದ ಪೆಗಾಸಸ್ ಸ್ಪೈವೇರ್ ಕುರಿತು ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (ಸಿಟ್) ದಿಂದ ತನಿಖೆ ನಡೆಸಬೇಕೆಂದು ಕೋರಿ ಅಡ್ವೊಕೇಟ್ ಎಮ್.ಎಲ್. ಶರ್ಮಾ ಅವರು ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

- Advertisement -

ರಫೇಲ್ ಒಪ್ಪಂದ, ಅರ್ಟಿಕಲ್ 370, ಹೈದರಾಬಾದ್ ಪೊಲೀಸ್ ಎನ್ ಕೌಂಟರ್ ಮುಂತಾದ ವಿಷಯಗಳಲ್ಲಿ ಸುಪ್ರೀಮ್ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸುವಲ್ಲಿ ಶರ್ಮಾ ಹೆಸರುವಾಸಿಯಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ 2019 ರಲ್ಲಿ ಸುಪ್ರೀಮ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದೇ ರೀತಿ ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆ ಮತ್ತು ರಫೇಲ್ ಹಗರಣದ ಕುರಿತು ಶರ್ಮಾ ರವರು ಸಾರ್ವಜನಿಕ ಅರ್ಜಿ ಸಲ್ಲಿಸಿದ್ದರು.
ಪ್ರಸಕ್ತ ಶರ್ಮಾ ಅವರು ರಾಜಕೀಯವಾಗಿ ಸಂಚಲನ ಮೂಡಿಸಿದ್ದ ಪೆಗಾಸಸ್ ಕುರಿತು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಯ ವಿರುದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಮಾತ್ರವಲ್ಲ, ಶರ್ಮಾ ಅವರು ಸುಪ್ರೀಮ್ ಕೋರ್ಟ್ ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ 2019 ರಲ್ಲಿ ಮೊದಲ ಬಾರಿಗೆ ಪೆಗಾಸಸ್ ಕುರಿತು ಅರೋಪ ಬಂದಾಗ ಆಗಿನ ಐಟಿ ಸಚಿವರಾದ ರವಿಶಂಕರ್ ಪ್ರಸಾದ್ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಮತ್ತು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಮಹಿಳಾ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ ಆರೋಪವನ್ನು ಫೆಗಾಸಸ್ ನಿಂದ ಬಹಿರಂಗವಾಗಿದೆಯೆಂದು ಈ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.



Join Whatsapp