ಚಂದ್ರಯಾನ-3 ಲ್ಯಾಂಡಿಂಗ್ ಗೆ ಕ್ಷಣಗಣನೆ : ಪಿಲಿಕುಳದಲ್ಲಿ ವೀಕ್ಷಣೆಗೆ ವ್ಯವಸ್ಥೆ

Prasthutha|

ಮಂಗಳೂರು: ಇಡೀ ದೇಶವು ಕಾತರದಿಂದ ನಿರೀಕ್ಷಿಸುತ್ತಿರುವ ಚಂದ್ರಯಾನ -3ರ ವಿಕ್ರಮ್‌ ಲ್ಯಾಂಡರ್‌ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯಲು ಕೌಂಟ್ ಡೌನ್ ಶುರುವಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಇಂದು (ಆ. 23) ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ವ್ಯವಸ್ಥೆಯನ್ನು ಮಾಡುತ್ತಿದೆ.

- Advertisement -

ಸಂಜೆ 5.20ರಿಂದ 6.30 ಗಂಟೆಯವರೆಗೆ ಚಂದ್ರನ ಸನಿಹದಲ್ಲಿ ನಡೆಯುವ ಈ ಕೌತುಕವನ್ನು ವೀಕ್ಷಿಸಲು ಕೇಂದ್ರದ ಸಭಾಭವನದಲ್ಲಿ ದೊಡ್ಡ ಪರದೆಯ ಮೇಲೆ ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಕೇಂದ್ರದ ಸಿಬಂದಿ ಇದರ ಬಗೆಗಿನ ಮಾಹಿತಿ ಹಾಗೂ ವೈಶಿಷ್ಟ್ಯಗಳನ್ನು ಆಸಕ್ತರಿಗೆ ವಿವರಿಸುವರು. ಇಂತಹ ಪ್ರಸಾರಕ್ಕೆ ವ್ಯವಸ್ಥೆಯಿರುವ ಎಲ್ಲ ಕಾಲೇಜು ಹಾಗೂ ವಿದ್ಯಾ ಸಂಸ್ಥೆಗಳು ನಮ್ಮ ವಿಜ್ಞಾನಿಗಳ ಈ ಸಾಧನೆಯ ನೇರ ಪ್ರಸಾರವನ್ನು ವೀಕ್ಷಿಸಲು ವ್ಯವಸ್ಥೆಯನ್ನು ಮಾಡಿ, ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬುವ ಪ್ರಯತ್ನ ಮಾಡುವಂತೆ ವಿನಂತಿಸಲಾಗಿದೆ.

ನೇರ ಪ್ರಸಾರ

- Advertisement -

ಉಡುಪಿ:ಪೂರ್ಣ ಪ್ರಜ್ಞ ಕಾಲೇಜಿನ ಭೌತಶಾಸ್ತ್ರ ವಿಭಾಗದಿಂದ ಚಂದ್ರಯಾನ-3ರ ಸೇಫ್ ಲ್ಯಾಂಡಿಂಗ್‌ ಕಾರ್ಯಕ್ರಮ ವೀಕ್ಷಣೆಗಾಗಿ ಆ. 23ರ ಸಂಜೆ 5.30ರಿಂದ ಕಾಲೇಜಿನ ಆವರಣದಲ್ಲಿ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರ ಪ್ರಕಟನೆ ತಿಳಿಸಿದೆ.

Join Whatsapp