Home ಟಾಪ್ ಸುದ್ದಿಗಳು ‘ಉತ್ತರ ಪ್ರದೇಶ ಕೇರಳದಂತಾಗುತ್ತದೆ’ ಎಂಬ ಆದಿತ್ಯನಾಥ್ ಹೇಳಿಕೆಗೆ ಪಿಣರಾಯಿ ವಿಜಯನ್ ತಿರುಗೇಟು

‘ಉತ್ತರ ಪ್ರದೇಶ ಕೇರಳದಂತಾಗುತ್ತದೆ’ ಎಂಬ ಆದಿತ್ಯನಾಥ್ ಹೇಳಿಕೆಗೆ ಪಿಣರಾಯಿ ವಿಜಯನ್ ತಿರುಗೇಟು

ತಿರುವನಂತಪುರ: ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಕೇರಳ ಕುರಿತ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಪಿಣರಾಯಿ ವಿಜಯನ್ ಕೇರಳದಲ್ಲಿ ಅತ್ಯುತ್ತಮ ಶಿಕ್ಷಣ, ಆರೋಗ್ಯ ಸೇವೆ, ಸಮಾಜ ಕಲ್ಯಾಣ, ಗುಣಮಟ್ಟದ ಜೀವನ ಪದ್ದತಿ ಹೊಂದಿದೆ. ಧರ್ಮ ಮತ್ತು ಜಾತಿ ಹೆಸರಿನಲ್ಲಿ ಜನರನ್ನು ಹತ್ಯೆ ಮಾಡದ ಸಾಮರಸ್ಯದ ಸಮಾಜವನ್ನು ಹೊಂದಿದ್ದು, ಉತ್ತರ ಪ್ರದೇಶ ಜನತೆ ಇದನ್ನೇ ಬಯಸುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಚುನಾವಣೆ ಪ್ರಾರಂಭವಾಗುವ ಕೆಲ ಹೊತ್ತು ಮೊದಲು ವೀಡಿಯೋ ಸಂದೇಶವೊಂದರಲ್ಲಿ ಮಾತನಾಡಿದ ಆದಿತ್ಯನಾಥ್, ಎಡಪಂಥೀಯ ಆಡಳಿತದ ಕೇರಳ, ಟಿ.ಎಮ್.ಸಿ ಆಡಳಿತದ ಬಂಗಾಳ ಮತ್ತು ಕಾಶ್ಮೀರದ ಪರಿಸ್ಥಿತಿ ಬರುವುದನ್ನು ತಡೆಯಲು ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಮತದಾರರನ್ನು ಒತ್ತಾಯಿಸಿದ್ದಾರೆ.

ಆದಿತ್ಯನಾಥ್ ಹೇಳಿಕೆಗೆ ವಿರೋಧ ಪಕ್ಷದ ನಾಯಕ, ಹಿರಿಯ ಕಾಂಗ್ರೆಸ್ ಮುಖಂಡ ವಿ.ಡಿ. ಸತೀಶನ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಮಧ್ಯೆ ಆದಿತ್ಯನಾಥ್ ಹೇಳಿಕೆಯ ವಿರುದ್ಧ ಕಾಂಗ್ರೆಸ್ ಮುಖಂಡ ಶಶಿ ತರೂರ್ ಕೂಡ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

Join Whatsapp
Exit mobile version