ಶಾರ್ಜಾಕ್ಕೆ ಪ್ರಯಾಣಿಕರನ್ನು ಹೊತ್ತ ವಿಮಾನ ತಿರುವನಂತಪುರದಲ್ಲಿ ತುರ್ತು ಭೂಸ್ಪರ್ಶ

Prasthutha|

ತಿರುವನಂತಪುರಂ: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಸೋಮವಾರ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

- Advertisement -

ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ 613 ತಮಿಳುನಾಡಿನ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಿಂದ ಶಾರ್ಜಾಕ್ಕೆ ಬೆಳಿಗ್ಗೆ 10:45 ಕ್ಕೆ ಹೊರಟಿತು. ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು 12.03ಕ್ಕೆ ವಿಮಾನವನ್ನು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ತುರ್ತು ಭೂಸ್ಪರ್ಶದಿಂದ ವಿಮಾನ ನಿಲ್ದಾಣದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೆ ಪ್ರಯಾಣಿಕರು ಪರದಾಡುವಂತಾಯಿತು. ಸದ್ಯ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಪ್ರಾಧಿಕಾರ ಹೇಳಿಕೆ ನೀಡಿದೆ.

Join Whatsapp