ಹುಬ್ಬಳ್ಳಿ : ಲ್ಯಾಂಡಿಗ್ ವೇಳೆ ವಿಮಾನದ ಟೈರ್ ಸ್ಫೋಟ | ಸ್ವಲ್ಪದರಲ್ಲೇ ತಪ್ಪಿದ ಭಾರೀ ಅನಾಹುತ!

Prasthutha: June 15, 2021

ಹುಬ್ಬಳ್ಳಿ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕೇರಳದ ಕಣ್ಣೂರಿನಿಂದ ಆಗಮಿಸಿದ್ದ ಇಂಡಿಗೋ ವಿಮಾನ ಲ್ಯಾಂಡಿಂಗ್ ವೇಳೆ ಟೈರ್ ಸ್ಫೋಟಗೊಂಡಿದ್ದು, ಪೈಲೆಟ್ ಮುಂಜಾಗ್ರತೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿ ಹೋಗಿದೆ.  

ಸೋಮವಾರ ರಾತ್ರಿ8:30ರ ಸುಮಾರಿಗೆ 15 ಪ್ರಯಾಣಿಕರನ್ನು ಹೊತ್ತುಕೊಂಡು ಬಂದಿದ್ದ ಇಂಡಿಗೋ 6ಇ-7979 ವಿಮಾನವನ್ನು ಪೈಲಟ್‌ ಲ್ಯಾಂಡಿಂಗ್ ಮಾಡುತ್ತಿರುವ ಸಂದರ್ಭ ಟಯರ್ ಬ್ಲಾಸ್ಟ್ ಆಗಿದ್ದು, ಸಮಯ ಪ್ರಜ್ಞೆ ಮೆರೆದ ಪೈಲಟ್ ಹಾರ್ಡ್ ಲ್ಯಾಂಡಿಂಗ್ ಮಾಡಿರುವುದರಿಂದ ಯಾವುದೇ ಅನಾಹುತ ಸಂಭವಿಸಲಿಲ್ಲ ಎಂದು  ಮೂಲಗಳು ತಿಳಿಸಿವೆ.

ಕಣ್ಣೂರಿನಿಂದ ಆಗಮಿಸಿದ್ದ ವಿಮಾನ ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಬೇಕಿತ್ತು. 26 ಪ್ರಯಾಣಿಕರು ಬೆಂಗಳೂರಿಗೆ ಪ್ರಯಾಣಿಸುವವರಿದ್ದರು. ವಿಮಾನ ಹಾರಾಟ ರದ್ದಾಗಿದ್ದರಿಂದ ಕಂಪನಿಯು ಪ್ರಯಾಣಿಕರನ್ನೆಲ್ಲಾ ಪರ್ಯಾಯ ವ್ಯವಸ್ಥೆ ಮೂಲಕ ಬೆಂಗಳೂರಿಗೆ ಕಳುಹಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!