ಜೋಗ ಜಲಪಾತ ವಿಶ್ವದರ್ಜೆಯ ಪ್ರವಾಸಿ ತಾಣವಾಗಿ ರೂಪಿಸಲು ಯೋಜನೆ: ನಾರಾಯಣ ಗೌಡ

Prasthutha|

ಸಾಗರ: ಜೋಗ ಜಲಪಾತ ಪ್ರದೇಶವನ್ನು ವಿಶ್ವದರ್ಜೆಯ ಪ್ರವಾಸಿ ತಾಣವಾಗಿ ರೂಪಿಸಲು ಯೋಜನೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ತಿಳಿಸಿದ್ದಾರೆ.

- Advertisement -

ಜೋಗ ಜಲಪಾತದ ಹಲವು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಜಲಪಾತ ಪ್ರದೇಶದ ಸಮಗ್ರ ಅಭಿವೃದ್ಧಿಗೆ ₹ 165 ಕೋಟಿ ಬಿಡುಗಡೆ ಮಾಡಲಾಗಿದೆ. ಈ
ಹಣ ಸರಿಯಾಗಿ ಬಳಕೆಯಾಗಲು ಕೆಪಿಸಿ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕೆಲಸ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.


ಶಾಸಕ ಎಚ್.ಹಾಲಪ್ಪ ಹರತಾಳು, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಪಿ.ಮಂಜುನಾಥ್, ಸದಸ್ಯ ಕೆ.ಸಿ. ಹರೀಶ್ಗೌಾಡ ಉಪಸ್ಥಿತರಿದ್ದರು.

Join Whatsapp