ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹಾರಿ ಬಂದ ಪ್ಲಾಸ್ಟಿಕ್ ಚೀಲಗಳು

Prasthutha|

ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕಲಬುರಗಿ ಜಿಲ್ಲೆಯ ಜೇವರ್ಗಿ’ಗೆ ಆಗಮಿಸಿದ ಸಂದರ್ಭ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ ಎದುರಾಗಿದೆ.

- Advertisement -

ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆಯಲ್ಲಿ ಭಾರೀ ಗಾಳಿ ಬೀಸಿದ ಪರಿಣಾಮ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ಹೆಲಿಪ್ಯಾಡ್ ಸುತ್ತ ಜಮೀನಿನಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಹಾಕಲಾಗಿದ್ದು, ಲ್ಯಾಂಡಿಂಗ್ ವೇಳೆ ಅವು ಗಾಳಿಯಲ್ಲಿ ಹಾರಿ ಬಂದಿವೆ. ತಕ್ಷಣವೇ ಎಚ್ಚೆತ್ತುಕೊಂಡ ಪೈಲಟ್, ಹೆಲಿಕಾಪ್ಟರ್ ಅನ್ನು ಬೇರೆಡೆಗೆ ತೆಗೆದುಕೊಂಡು ಹೋಗಿದ್ದಾರೆ. ಲ್ಯಾಂಡಿಂಗ್ ವೇಳೆ ಹಾರಿ ಬಂದ ಪ್ಲಾಸ್ಟಿಕ್ ಚೀಲಗಳನ್ನು ತಕ್ಷಣ ಪೋಲಿಸರು ತೆರವು ಮಾಡಿದ್ದು, ನಂತರ ಹೆಲಿಕಾಪ್ಟರ್ ಲ್ಯಾಂಡ್ ಮಾಡಲಾಗಿದೆ.

Join Whatsapp