ಕೋವಿಡ್ ಲಸಿಕಾ ಪ್ರಮಾಣ ಪತ್ರದಿಂದ ಪ್ರಧಾನಿ ಮೋದಿ ಫೋಟೋ ತೆಗೆಸಲು ಕೇರಳ ಹೈಕೋರ್ಟ್ ನಲ್ಲಿ ಅರ್ಜಿ

Prasthutha|

ಕೊಚ್ಚಿನ್: ಕೋವಿಡ್ ಲಸಿಕೆ ಹಾಕಿಸಿದ ನಂತರ ನಾಗರಿಕರಿಗೆ ನೀಡಲಾಗುವ ಪ್ರಮಾಣ ಪತ್ರದ ಮೇಲೆ ಪ್ರಧಾನಿ ಮೋದಿ ಅವರ ಫೋಟೋವನ್ನು ಅಂಟಿಸಿರುವ ಕ್ರಮವನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

- Advertisement -

ನ್ಯಾಯಮೂರ್ತಿ ಪಿ ಬಿ ಸುರೇಶ್ ಕುಮಾರ್ ಅವರು ಈ ಅರ್ಜಿಯನ್ನು ಸ್ವೀಕರಿಸಿ, ಎರಡು ವಾರಗಳ ನಂತರ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದ್ದಾರೆ.

ಕೋವಿಡ್ ಲಸಿಕೆಯಲ್ಲಿ ಪ್ರಧಾನಿ ಮೋದಿಯ ಫೋಟೋದಿಂದ ಆಕ್ರೋಶಿತಗೊಂಡ ಆರ್.ಟಿ.ಐ ಕಾರ್ಯಕರ್ತ ವಕೀಲರಾದ ಅಜಿತ್ ಜಾಯ್ ಮೂಲಕ ಕೇರಳ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಕೋವಿಡ್ ಲಸಿಕಾ ಪ್ರಮಾಣಪತ್ರದಲ್ಲಿ ಪ್ರಧಾನಿಯ ಫೋಟೋವನ್ನು ಅಳವಡಿಸುವುದರಿಂದ ಸಾರ್ವಜನಿಕ ಹಿತಾಸಕ್ತಿಯನ್ನು ಪೂರೈಸದಂತಾಗುವುದಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಮಾತ್ರವಲ್ಲ ಖಾಸಗಿ ಆಸ್ಪತ್ರೆಯಲ್ಲಿ ಹಣ ಪಾವತಿಸಿ ಪಡೆಯುವ ಲಸಿಕೆಗೆ ಸರ್ಕಾರ ಯಾವುದೇ ಸಹಾಯಧನವನ್ನು ನೀಡುತ್ತಿಲ್ಲ ಎಂದು ಆರೋಪಿಸಲಾಗಿದೆ.

Join Whatsapp