ರಾಜಕಾರಣದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

Prasthutha|

- Advertisement -

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಬಹಳ ಒಳ್ಳೆಯ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಆರು ಬಾರಿ ಶಾಸಕರಾಗಿ, ನಾನು ಎರಡು ಬಾರಿ ಶಾಸಕಿಯಾಗಿ, ಮೊದಲ ಬಾರಿ ಸಚಿವೆ ಆಗಿರುವೆ. ಸತೀಶಣ್ಣ ಬಹಳ ಅನುಭವ ಇರುವವರು. ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.