ವಿನೇಶ್ ಫೋಗಟ್ ಅನರ್ಹ; ಸೂಕ್ತ ಕ್ರಮ ಕೈಗೊಳ್ಳಲು ಪ್ರಧಾನಿ ಸೂಚನೆ: ಲೋಕಸಭೆಗೆ ತಿಳಿಸಿದ ಕೇಂದ್ರ ಸಚಿವ

Prasthutha|

ನವದೆಹಲಿ: ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಒಲಿಂಪಿಕ್ಸ್‌ ನಿಂದ ಅನರ್ಹಗೊಳಿಸಿರುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಭಾರತ ಒಲಿಂಪಿಕ್ ಸಂಸ್ಥೆಗೆ (ಐಒಎ) ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ನೀಡಿದ್ದಾರೆ ಎಂದು ಲೋಕಸಭೆಗೆ ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ.

- Advertisement -


ಈ ಕುರಿತು ಲೋಕಸಭೆಗೆ ಮಾಹಿತಿ ನೀಡಿರುವ ಕೇಂದ್ರ ಸಚಿವ ಮನ್ ಸುಖ್ ಮಾಂಡವೀಯ, ‘ಫೋಗಟ್ ಅನರ್ಹ ಸಂಬಂಧ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ಗೆ (ಯುಡಬ್ಲ್ಯುಡಬ್ಲ್ಯು) ಭಾರತ ಒಲಿಂಪಿಕ್ಸ್ ಸಂಸ್ಥೆ ತೀವ್ರ ಪ್ರತಿಭಟನೆ ದಾಖಲಿಸಿದೆ’ ಎಂದು ತಿಳಿಸಿದ್ದಾರೆ.


‘ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಐಒಎ ಅಧ್ಯಕ್ಷೆ ಪಿ.ಟಿ.ಉಷಾ ಅವರೊಂದಿಗೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಫೋಗಟ್ ಅನರ್ಹಗೊಂಡಿರುವುದಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸದನವನ್ನು ಬಹಿಷ್ಕರಿಸಿದವು.



Join Whatsapp