ನವದೆಹಲಿ: ಪ್ರಧಾನಿ ಸ್ಥಾನಕ್ಕೆ ಮೋದಿ ರಾಜೀನಾಮೆ ನೀಡಿದ್ದಾರೆ.
ಮೋದಿ ಜೊತೆಗೆ ಸಚಿವರು ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆಯನ್ನು ರಾಷ್ಟ್ರಪತಿ ಮುರ್ಮು ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಪ್ರಧಾನಿ ಮೋದಿ 17ನೇ ಲೋಕಸಭೆಯನ್ನು ವಿಸರ್ಜಿಸುವಂತೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ 17 ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಲಾಯಿತು.