ಇಂದು ಬೆಳಗಾವಿಗೆ ಪಿಎಂ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ

Prasthutha|

ಬೆಳಗಾವಿ: ಇಂದು ಬೆಳಗಾವಿ ಚುನಾವಣಾ ಅಖಾಡಕ್ಕೆ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿ ಭೇಟಿ ನೀಡಲಿದ್ದಾರೆ.

- Advertisement -

ರಾಜ್ಯದ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿದೆ. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಿಗೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪವರ್​ ಸೆಂಟರ್ ಎನಿಸಿಕೊಂಡಿರುವ ಬೆಳಗಾವಿಗೆ ಇಂದು ಏಕಕಾಲಕ್ಕೆ ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಧುಮುಕಲಿದ್ದಾರೆ.

ಬೆಳಿಗ್ಗೆ 11ಕ್ಕೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ ನಡೆಸಲಿದ್ದು, ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಬಳಿಕ 11.55ಕ್ಕೆ ಬೆಳಗಾವಿಯಿಂದ ಶಿರಸಿಗೆ ಪ್ರಯಾಣ ಬೆಳಸಲಿದ್ದಾರೆ. ಇಂದೇ ಬೆಳಗಾವಿ ಮತ್ತು ಚಿಕ್ಕೋಡಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಚಿಕ್ಕೋಡಿ ಕ್ಷೇತ್ರ ವ್ಯಾಪ್ತಿಯ ಉಗಾರ್ ಖುರ್ದ್, ಬೆಳಗಾವಿ ಕ್ಷೇತ್ರದ ಯರಗಟ್ಟಿಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಿದ್ದರಾಮಯ್ಯ ಒಂದೇ ದಿನ ಎರಡೂ ಕ್ಷೇತ್ರಗಳಲ್ಲಿ ಒಂದೊಂದು ಸಮಾವೇಶ ನಡೆಸಲಿದ್ದಾರೆ.

- Advertisement -

ಬೆಳಗಾವಿ ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನನ್ನು‌ ಕಣಕ್ಕಿಳಿಸಿ​ ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಅವರೂ ಗೆಲ್ಲಲು ರಣತಂತ್ರ ರೂಪಿಸಿದ್ದಾರೆ.

Join Whatsapp