Home ಟಾಪ್ ಸುದ್ದಿಗಳು ಯಲ್ಲಾಪುರ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ: ತಲಾ 2 ಲಕ್ಷ ರೂ....

ಯಲ್ಲಾಪುರ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ: ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಫುರದ ಬಳಿ ಇಂದು ಬೆಳಗ್ಗೆ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 10 ಜನ ಮೃತಪಟ್ಟಿದ್ದರು. 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.


ಅಲ್ಲದೆ, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಕರ್ನಾಟಕ ಸರ್ಕಾರದಿಂದ ಈಗಾಗಲೇ 3 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಲಾಗಿದೆ.


ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.


ಹಾಗೇ, ಮೃತರ ಪ್ರತಿ ಕುಟುಂಬಕ್ಕೂ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

Join Whatsapp
Exit mobile version