Home ಟಾಪ್ ಸುದ್ದಿಗಳು ಮೋದಿ ಹಿಂದೂಗಳಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ: ಫಾರೂಕ್ ಅಬ್ದುಲ್ಲಾ

ಮೋದಿ ಹಿಂದೂಗಳಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ: ಫಾರೂಕ್ ಅಬ್ದುಲ್ಲಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರದಲ್ಲಿ ಉಳಿಯಲು ಹಿಂದೂಗಳಲ್ಲಿ ಭಯದ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್ ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.


ಮೋದಿ ಅಧಿಕಾರಕ್ಕೆ ಬಂದ ನಂತರ ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ಇನ್ನು ಮುಂದೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. ಮೋದಿಯ ಈ ಒಡೆದು ಆಳುವ ರಾಜಕೀಯದಿಂದ ದೂರವಿರಲು ಜನರ ಬಳಿ ಮನವಿ ಮಾಡಿಕೊಂಡಿದ್ದಾರೆ.

ಮೋದಿ ಮುಸ್ಲಿಮರ ಬಗ್ಗೆ ಹಿಂದೂಗಳಲ್ಲಿ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆ ಮತ್ತು ನಂತರ ಮುಸ್ಲಿಮರು ಹೆಚ್ಚು ಮಕ್ಕಳನ್ನು ಉತ್ಪಾದಿಸುತ್ತಾರೆ ಎಂದು ಅವರು ಹೇಳುತ್ತಾರೆ. ದೇವರು ಮಕ್ಕಳನ್ನು ಕೊಡುತ್ತಾನೆ. ಅನೇಕ ಜನರಿಗೆ ಮಕ್ಕಳೇ ಆಗುವುದಿಲ್ಲ. ಮೋದಿಗೆ ಮಕ್ಕಳಿಲ್ಲದಿರುವಾಗ ಈ ಬಗ್ಗೆ ಅವರಿಗೆ ಏನು ಗೊತ್ತು? ಅವರು ತನ್ನ ಹೆಂಡತಿಯನ್ನು ಸಹ ಗೌರವಿಸಲಿಲ್ಲ, ಅಂಥವರು ಮಕ್ಕಳನ್ನು ಹೇಗೆ ಗೌರವಿಸುತ್ತಾರೆ? ಎಂದು ಅಬ್ದುಲ್ಲಾ ಸಭೆಯನ್ನು ಕೇಳಿದ್ದಾರೆ.

Join Whatsapp
Exit mobile version