Home ಟಾಪ್ ಸುದ್ದಿಗಳು ರೈಲ್ವೆಯಲ್ಲಿ ಲಕ್ಷಾಂತರ ಹುದ್ದೆ ಖಾಲಿಯಿದ್ದರೂ ಯುವ ಜನರಿಗೆ ಮೋದಿ ಅನ್ಯಾಯ ಮಾಡುತ್ತಿದ್ದಾರೆ: ರಾಹುಲ್ ಗಾಂಧಿ

ರೈಲ್ವೆಯಲ್ಲಿ ಲಕ್ಷಾಂತರ ಹುದ್ದೆ ಖಾಲಿಯಿದ್ದರೂ ಯುವ ಜನರಿಗೆ ಮೋದಿ ಅನ್ಯಾಯ ಮಾಡುತ್ತಿದ್ದಾರೆ: ರಾಹುಲ್ ಗಾಂಧಿ

ಬೆಂಗಳೂರು: ರೈಲ್ವೆಯಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿಯಿದ್ದರೂ ಸೂಕ್ತವಾಗಿ ನೇಮಕಾತಿ ಮಾಡಿಕೊಳ್ಳದೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.


ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಹುಲ್ ಗಾಂಧಿ X ತಾಣದಲ್ಲಿ ಕಿಡಿಕಾರಿದ್ದಾರೆ.


ರೈಲ್ವೆಯಲ್ಲಿ ಲಕ್ಷಗಟ್ಟಲೆ ಹುದ್ದೆಗಳು ಖಾಲಿಯಿದ್ದರೂ, ಯುವಕರು 5 ವರ್ಷ ಕಾಯ್ದರೂ ಈಗ ಕೇವಲ 5,696 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷಾ ವಿದ್ಯಾರ್ಥಿಗಳಿಗೆ ಭಾರಿ ಅನ್ಯಾಯವಾಗಿದೆ ಎಂದು ಟೀಕಿಸಿದ್ದಾರೆ.


ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ನೀವು, ಯಾರಿಗೆ ಲಾಭ ಮಾಡಿ ಕೊಡಲು ರೈಲ್ವೆಯಲ್ಲಿ ಹುದ್ದೆಗಳ ಕಡಿತ ಮಾಡುತ್ತಿದ್ದೀರಿ. ರೈಲ್ವೆಯನ್ನು ಖಾಸಗೀಕರಣ ಮಾಡುವುದಿಲ್ಲ ಎಂಬ ನಿಮ್ಮ ಭರವಸೆ ಏನಾಯಿತು? ಎಂದು ಪ್ರಶ್ನಿಸಿದ್ದಾರೆ.

Join Whatsapp
Exit mobile version