ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂಜೆ ಪ್ರಧಾನಿ ಮೋದಿ ತುರ್ತು ಸಭೆ | ಮತ್ತೆ ಲಾಕ್ ಡೌನ್ ಘೋಷಣೆ?

Prasthutha|

ನವದೆಹಲಿ: ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದಾಗಿ ರಾಜ್ಯಗಳಲ್ಲಿ ಲಾಕ್ ಡೌನ್ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 6.30ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಕೊರೋನಾ ನಿಯಂತ್ರಿಸುವ ಸಲುವಾಗಿ ಮತ್ತೆ ಲಾಕ್ ಡೌನ್ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

ದೇಶದಲ್ಲಿ 1.15 ಲಕ್ಷಕ್ಕೂ ಹೆಚ್ಚು ಹೊಸ ಕೊರೊನಾ ವೈರಸ್ ಪ್ರಕರಣಗಳನ್ನ ವರದಿಯಾಗಿದೆ. ಮಾರ್ಚ್ 17 ರಂದು ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದ್ದ ಪ್ರಧಾನಮಂತ್ರಿಯವರು ದೇಶದ ಕೆಲವು ಭಾಗಗಳಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿ ಕೊರೋನಾದ 2ನೇ ಅಲೆಯನ್ನು ನಿಯಂತ್ರಿಸಲು ತ್ವರಿತ ಮತ್ತು ನಿರ್ಣಾಯಕ ಕ್ರಮಗಳಿಗೆ ಕರೆ ನೀಡಿದ್ದರು. ಸೋಂಕುಗಳು ಮತ್ತು ಸಾವುಗಳ ಆತಂಕಕಾರಿ ಬೆಳವಣಿಗೆಯ ನಡುವೆ ದೇಶದಲ್ಲಿ ಕೋವಿಡ್19 ಪರಿಸ್ಥಿತಿ ಮತ್ತು ಲಸಿಕೆಯನ್ನು ಪರಿಶೀಲಿಸಲು ಪ್ರಧಾನಿ ಮೋದಿ ಅವರು ಭಾನುವಾರ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದರು.

ಈ ವೇಳೆ ಕೋವಿಡ್ ನಿಯಂತ್ರಣ ಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಕೊರತೆಯೇ ಪ್ರಕರಣಗಳ ತೀವ್ರ ಏರಿಕೆಗೆ ಕಾರಣ ಎಂದು ಹೇಳಿಕೆಯಲ್ಲಿ ತಿಳಿಸಿದ್ದರು.

Join Whatsapp