ವಿವಿ ಪ್ರವೇಶ ಪತ್ರಗಳಲ್ಲಿ ಪ್ರಧಾನಿ ಮೋದಿ, ರಾಜ್ಯಪಾಲರ ಫೋಟೊ: ತನಿಖೆಗೆ ಆದೇಶ

Prasthutha|

ಪಟ್ನಾ: ಲಲಿತ್ ನಾರಾಯಣ್ ಮಿಥಿಲಾ ವಿಶ್ವವಿದ್ಯಾಲಯವು ವಿತರಿಸಿದ್ದ ಪರೀಕ್ಷಾ ಪ್ರವೇಶ ಪತ್ರಗಳಲ್ಲಿ ಪ್ರಧಾನಿ ಮೋದಿ, ಕ್ರಿಕೆಟರ್ ಮಹೇಂದ್ರ ಸಿಂಗ್ ಧೋನಿ ಹಾಗೂ ಬಿಹಾರ ರಾಜ್ಯಪಾಲ ಫಾಗು ಚೌಹಾಣ್ ಅವರ ಭಾವಚಿತ್ರಗಳನ್ನು ಮುದ್ರಿಸಲಾಗಿದ್ದು, ಈ ಕುರಿತು ತನಿಖೆಗೆ ಆದೇಶಿಸಲಾಗಿದೆ.

- Advertisement -


ವಿಶ್ವವಿದ್ಯಾಲಯದ ಅಡಿಯಲ್ಲಿ, ಮಧುಬನಿ, ಸಮಸ್ತಿಪುರ ಮತ್ತು ಬೇಗುಸುರೈ ಜಿಲ್ಲೆಗಳಲ್ಲಿರುವ ಕಾಲೇಜುಗಳಲ್ಲಿ ಬಿ.ಎ ಪದವಿಯ ಮೂರನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯಬೇಕಾಗಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಶ್ವವಿದ್ಯಾಲಯದ ಕುಲಸಚಿವ ಮುಷ್ತಾಕ್ ಅಹ್ಮದ್ , ಪ್ರವೇಶ ಪತ್ರಗಳನ್ನು ಆನ್ ಲೈನ್ ಮೂಲಕ ವಿತರಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಭಾವಚಿತ್ರ ಹಾಗೂ ಇತರೆ ಮಾಹಿತಿಗಳನ್ನು ಆನ್ ಲೈನ್ ಮೂಲಕ ಅಪ್ ಲೋಡ್ ಮಾಡಬೇಕಿತ್ತು. ಈ ವೇಳೆ ಕೆಲವರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ’ ಎಂದು ತಿಳಿಸಿದರು.

- Advertisement -

ಈ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ. ಅಲ್ಲದೇ ಎಫ್ ಐಆರ್ ಕೂಡ ದಾಖಲಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.



Join Whatsapp